ಮಹಿಳೆಯರಿಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಸೆ.22: ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಭದ್ರತೆ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಜಾತ್ಯಾತೀತ ಮಹಿಳಾ ರಕ್ಷಣಾ ವೇದಿಕೆ, ಕದಂಬ ಸೈನ್ಯ ವತಿಯಿಂದ ಪ್ರತಿಭಟನೆ ನಡೆಯಿತು.
ಮೈಸೂರು ಜಿಲ್ಲಾಧಿಕಾರಿಗಳ ಕಛೇರಿ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಶಾಲೆಗಳ ಮತ್ತು ಕಾಲೇಜುಗಳ ಬಳಿ ಯಾವಾಗಲೂ ಪೆÇಲೀಸ್ ಸಿಬ್ಬಂದಿಯನ್ನು ನೇಮಿಸಬೇಕು. ಮೈಸೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಗುಂಪುಗೂಡುವುದನ್ನು ತಡೆಯಬೇಕು. ವಿದ್ಯಾರ್ಥಿಗಳು ಮತ್ತು ಮಹಿಳೆಯರು ಮನೆಗೆ ಹೋಗುವ ಮಾರ್ಗದಲ್ಲಿ ಮೈದಾನಗಳು ಮತ್ತು ಉದ್ಯಾನವನಗಳ ಬಳಿ ಹುಡುಗರು ಗುಂಪುಗೂಡಿ ಚುಡಾಯಿಸಿದರೆ ಉಗ್ರಶಿಕ್ಷೆ ನೀಡಬೇಕು. ಮಹಿಳೆಯರನ್ನು ಮತ್ತು ವಿದ್ಯಾರ್ಥಿಗಳನ್ನು ಅನೈತಿಕ ಕೆಲಸಗಳಿಗೆ ಬಳಸಿಕೊಳ್ಳುವವರಿಗೆ ಉಗ್ರಶಿಕ್ಷೆಯನ್ನು ನೀಡಬೇಕು. ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡಿದ ಸಂಘಟನೆಗಳಿಗೆ ಅನುಮತಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಮೈಸೂರು ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದವರೆಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಲಾವಣ್ಯ, ರತ್ನಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.