ಮಹಿಳೆಯರಿಗೆ ಮೊದಲ ಅದ್ಯತೆ ನೀಡಿ : ಮಡೋಳಪ್ಪ

ರಾಯಚೂರು,ನ.೨೪-ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಕಸ ಘನ ಮತ್ತು ದ್ರವ ತ್ಯಾಜ್ಯ ಘಟಕಗಳ ನಿರ್ವಹಣೆ ಮಾಡಲು ಸಂಜೀವಿನಿ ಒಕ್ಕೂಟದ ಮೇರೆಗೆ ತರಬೇತಿ ಪಡೆದ ಮಹಿಳೆಯರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಯೋಜನಾ ಅಧಿಕಾರಿ ಮಡೋಳಪ್ಪ ಅವರು ಹೇಳಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಯೋಜನೆ ಮತ್ತು ಜಿಲ್ಲಾ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಘನ ಮತ್ತು ದ್ರವ ತ್ಯಾಜ್ಯ ಘಟಗಳ ನಿರ್ವಹಣೆ ಮಾಡಲು ಗ್ರಾಮ ಪಂಚಾಯತ್ ಮತ್ತು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ನಡುವೆ ಒಡಂಬಡಿಕೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಗ್ರಾಮ ಪಂಚಾಯತ್ ಗಳಲ್ಲಿ ಕಸ ಮತ್ತು ಘನ ತ್ಯಾಜ್ಯ ವಿಲೇವೇರಿ ಮತ್ತು ವಾಹನ ಚಾಲಯಿಸಲು ಮಹಿಳೆಯರಿಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ವತಿಯಿಂದ ತರಬೇತಿ ನೀಡಲಾಗುತ್ತದೆ ಎಂದು ಅವರು ಹೇಳಿದರು. ಸಂಜೀವಿನಿ ಸಂಘ ಮತ್ತು ಪಂಚಾಯತ್ ಮಟ್ಟದಲ್ಲಿ ಒಪ್ಪಂದವನ್ನು ಮಾಡಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.