ಮಹಿಳೆಯರಿಗೆ ವಿಶೇಷ ಯೋಜನೆ ಜಾರಿ

ಕೆ.ಆರ್.ಪುರ,ಮಾ.೨-ಸರ್ಕಾರ ಸಮಾಜದ ಹಿಂದುಳಿದ ವರ್ಗದ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಅದರ ಸದುಪಯೋಗ ಪಡಿಸಿಕೊಳ್ಳಿ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದರು.
ಮಹದೇವಪುರ ಕ್ಷೇತ್ರದ ಕಾಟಂನಲ್ಲೂರು ಸಮೀಪ ಖಾಸಗಿ ಕಲ್ಯಾಣ ಮಂಟಪದಲ್ಲಿ ವಿವಿಧ ಯೋಜನೆಗಳ ಸ್ವಸಹಾಯ ಸಂಘಗಳ ಸದಸ್ಯರ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ಡಬಲ್ ಇಂಜಿನ್ ಸರ್ಕಾರ ದುರ್ಬಲರನ್ನು ಸಬಲೀಕರಣಗೊಳಿಸಲು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಸಮಾಜದ ಕಟ್ಟಕಡೆಯ ಜನರನ್ನೂ ತಲುಪುವುದು ಇದರ ಉದ್ದೇಶ ಎಂದರು.
ಇದೇ ವೇಳೆ ಪರಿಶಿಷ್ಟ ಜಾತಿಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಪರಿಹಾರ ಚೆಕ್‌ಗಳನ್ನು ನೀಡಲಾಯಿತು. ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ ಸಮುದಾಯಗಳಿಗೆ ಶ್ಲಾಘನೆ ಪತ್ರ ನೀಡಿ ಗೌರವಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ, ಅಂತರ್ಜಾತಿಯ ವಿವಾಹ ಉತ್ತೇಜನ ನಿಧಿ, ಪಶು ಸಂಗೋಪನಾ ಇಲಾಖೆ, ರೇಷ್ಮೆ ಇಲಾಖೆಗೆ ಹಲವು ಸೌಲಭ್ಯಗಳನ್ನು ವಿತರಿಸಲಾಗಿದೆ. ಅಂಗವಿಕಲರಿಗೆ ಗಾಲಿಕುರ್ಚಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ಮುಖ್ಯ ಲೆಕ್ಕಾಧಿಕಾರಿ ಲಲಿತಾ ಕೆ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ನಟರಾಜ್,ಜಿ.ಪಂ.ಸದಸ್ಯ ಗಣೇಶ್,ಬಿದರಹಳ್ಳಿ ಗ್ರಾ.ಪಂ ಅಧ್ಯಕ್ಷ ರಾಜೇಶ್, ಕಿತ್ತಗನೂರು ಪಂಚಾಯತಿ ಮಾಜಿ ಅಧ್ಯಕ್ಷ ಶ್ರೀನಿವಾಸ್, ಮಂಜುನಾಥ್ ಮತ್ತಿತರರು ಹಾಜರಿದ್ದರು.


ವಿವಿಧ ಯೋಜನೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಶಾಸಕ ಅರವಿಂದಲಿಂಬಾವಳಿ ಅವರು ವಿತರಣೆ ಮಾಡಿದರು.