ಮಹಿಳೆಯರಿಗೆ ಸ್ವಾಭಿಮಾನದ ಬದುಕು ಅಗತ್ಯ

ಚಿಕ್ಕಬಳ್ಳಾಪುರ.ಏ.೧೧: ಪುರುಷರಿಗೆ ಇರುವ ಅವಕಾಶಗಳನ್ನು ಮಹಿಳೆಯರಿಗೆ ಸಹ ಸಮಾನ ಅವಕಾಶಗಳನ್ನು ಕಲ್ಪಿಸಿ, ಆರ್ಥಿಕ ಚೈತನ್ಯದ ಜೊತೆಗೆ ನೆಮ್ಮದಿಯ, ಸ್ವಾಭಿಮಾನದ ಬದುಕನ್ನು ಕಲ್ಪಿಸಬೇಕಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್ ಪ್ರತಿಪಾದಿಸಿದರು.
ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-೭ ರ ಟೋಲ್ ಕೇಂದ್ರದ ಬಳಿ ಶನಿವಾರ ಹರೀಶ್ ಏಕ್ಸ್ ಪೋಟ್ಸ್ ಹಾಗು ಮಯೂರಿ ಪತ್ತಿನ ಸಹಕಾರ ಸಂಘದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕ ಹಕ್ಕುಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಲ್ಪಸಿದೆ. ಆದರೆ ಕೆಲವರು ವಿನಾಃಕಾರಣ ಹೋರಾಟಗಳನ್ನು ಮಾಡುತ್ತಾರೆ. ಜನಜಾಗೃತಿ, ಶಿಕ್ಷಣದ ಕೊರತೆಯಿಂದ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉದ್ಯೋಗ ಸೃಷ್ಠಿ ಮಾಡಿ, ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರಿಗೆ ಜನಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಬಿ.ಎನ್.ಬಚ್ಚೇಗೌಡ ಮಾತನಾಡಿ, ’ಕಾರ್ಮೀಕ ಸಚಿವರಾಗಿ ೫ ವರ್ಷ ಸೇವೆ ಮಾಡಿದ್ದೇನೆ. ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ವೇತನಗಳನ್ನು ಸಮರ್ಪಕವಾಗಿ ನೀಡಲು ಶ್ರಮಿಸಿದ್ದೇನೆ, ೫ ಲಕ್ಷ ಮಂದಿ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದ್ದೇನೆ. ಬಾಗೇಪಲ್ಲಿಯಂತಹ ಹಿಂದುಳಿದ ಪ್ರದೇಶದಲ್ಲಿ ಗಾರ್ಮೆಂಟ್ಸ್ ಗಳನ್ನು ತೆರೆದು, ನಿರುದ್ಯೋಗಿಗಳಿಗೆ ಉದ್ಯೋವಾಕಾಶಗಳನ್ನು ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಮಾಜಿ ಅಧ್ಯಕ್ಷ ಕೇಶವರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ವಿ.ವೆಂಕಟಶಿವಾರೆಡ್ಡಿ, ಸಮಾಜ ಸೇವಕ ಗುಂಜೂರುಶ್ರೀನಿವಾಸರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್, ಬಿಜೆಪಿ ಮಂಡಲ ಅಧ್ಯಕ್ಷ ಆರ್.ಪ್ರತಾಪ್, ಹರೀಶ್ ಏಕ್ಸ್ ಪೋರ್ಟ್ಸ್ ನ ಮಾಲೀಕ ಎಸ್.ಎ.ಹರೀಶ್ ಹಾಗೂ ಬಿಜೆಪಿ ಯುವ ಮುಖಂಡ ಎಸ್ ಪಿ ಶ್ರೀನಿವಾಸ್ ಉಪಸ್ಥಿತರಿದ್ದರು.