
ಬೀದರ, ಮಾ. 29: ಆಯುಷ್ಮತಿ ಕ್ಲಿನಿಕ್ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಅವರು ಸೋಮವಾರ ನಗರದ ಬಿದ್ರಿ ಕಾಲೋನಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂತನ ಆಯುಷ್ಮತಿ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿದರು.
ಆಯುಷ್ಮತಿ ಕ್ಲಿನಿಕ್‍ನಲ್ಲಿ ಪ್ರತಿ ದಿನ ಓರ್ವರಂತೆ ಬೇರೆ ಬೇರೆ ತಜ್ಞ ವೈದ್ಯರಿಂದ ಸೇವೆ ನೀಡಲಾಗುತ್ತಿದ್ದು, ಎಲ್ಲಾ ಮಹಿಳಾ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯರ ವಿಶೇಷ ಆರೋಗ್ಯ ತಪಾಸಣೆಗಾಗಿ ಆಯುಷ್ಮತಿ ಕ್ಲಿನಿಕ್ ಪ್ರಾರಂಭಿಸಲಾಗಿದೆ. ಸ್ವಸ್ಥ ಮಹಿಳೆಯರು ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ತಜ್ಞ ವೈದ್ಯರಿಂದ ಪ್ರತಿದಿನ ಮಹಿಳೆಯರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಪ್ರತಿ ಸೋಮವಾರ ಫಿಸಿಷಿಯನ್, ಮಂಗಳವಾರ ಮೂಳೆ ಮತ್ತು ಕೀಲು ತಜ್ಞರು, ಬುಧವಾರ ಶಸ್ತ್ರ ಚಿಕಿತ್ಸಾ ತಜ್ಞರು, ಗುರುವಾರ ಮಕ್ಕಳ ತಜ್ಞರು, ಶುಕ್ರವಾರ ಸ್ತ್ರೀರೋಗ ತಜ್ಞರು, ಶನಿವಾರ ಇತರೆ (ಕಿವಿ, ಮೂಗು ಮತ್ತು ಗಂಟಲು, ನೇತ್ರ, ಚರ್ಮರೋಗ, ಮಾನಸಿಕ ರೋಗ) ತಜ್ಞರು ಸೇವೆ ನೀಡುತ್ತಾರೆ. ಅಲ್ಲದೆ ಉಚಿತವಾಗಿ ಮಹಿಳೆಯರಿಗೆ ಆಪ್ತ ಸಮಾಲೋಚನೆ, ಲ್ಯಾಬ್ ಪರೀಕ್ಷೆಗಳು, ಔಷಧಿ, ಕ್ಷೇಮ ಚಟುವಟಿಕೆಗಳಾದ ಯೋಗ ಮತ್ತು ಧ್ಯಾನ ಹಾಗೂ ರೆಫರಲ್ ಸೇವೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ. ರಾಜಶೇಖರ ಪಾಟೀಲ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವಶಂಕರ ಭತಮುರ್ಗೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಶರಣಯ್ಯಾ ಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಂಕರೆಪ್ಪಾ ಬೊಮ್ಮಾ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಕಿರಣ ಪಾಟೀಲ, ಬೀದರ ತಾಲೂಕಾ ಆರೋಗ್ಯ ಅಧಿಕಾರಿ ಡಾ. ಸಂಗಾರೆಡ್ಡಿ, ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸತೀಷ ಪಾಟೀಲ, ಎಲ್ಲಾ ತಜ್ಞ ವೈದ್ಯರು, ನಗರ ಕಾರ್ಯಕ್ರಮ ವ್ಯವಸ್ಥಾಪಕ ರವಿ ಎಸ್. ಶೆಂಬೆಳ್ಳಿ, ಓಂಕಾರ ಮಲ್ಲಿಗೆ, ಅಶೋಕ, ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಶುಶ್ರೂಷಕಿಯರು, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವೀರಶೆಟ್ಟಿ ಚನಶೆಟ್ಟಿ ನಿರೂಪಿಸಿದರು.