ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್

ಬೆಂಗಳೂರು, ಜೂ.5-ಸರ್ಕಾರಿ ಬಸ್ ಗಳಲ್ಲಿ ಉಚಿತ ಬಸ್ ಪ್ರಯಾಣಕ್ಕಾಗಿ ಸರ್ಕಾರ ಮಾರ್ಗಸೂಚಿಯನ್ನು ಇಂದು ಪ್ರಕಟಿಸಿದೆ.
ಮಹಿಳೆಯರು ಸೇವಾ ಸಿಂಧು ಮೂಲಕ ಅರ್ಜಿ ಪಡೆಯಬೇಕಾಗುತ್ತದೆ. ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವ ಪ್ರಕ್ರಿಯೆಯನ್ನು
ಮುಂದಿನ ಮೂರು ತಿಂಗಳ ಒಳಗಾಗಿ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದೆ.
ಜೂನ್ 11ರಿಂದ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ರಾಜ್ಯದೊಳಗೆ ಮಾತ್ರ ಪ್ರಯಾಣ ಮಾಡಲು ಇದು ಅನ್ವಯವಾಗಲಿದೆ.

ಮಾರ್ಗಸೂಚಿ ಪ್ರಕಟ

ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್-ಎ.ಸಿ.ಸ್ಲೀಪರ್‌, ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಇವುಗಳಿಗೆ ಈ ಯೋಜನೆ ಅನ್ವಯವಾಗಲ್ಲ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್‌ಗಳಲ್ಲಿ (ಅಂತರರಾಜ್ಯ, ಎ.ಸಿ. ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಲಾಗುತ್ತದೆ.

ಉಚಿತ ಬಸ್ ಪಾಸ್ ವ್ಯವಸ್ಥೆಯಿಂದ ನಾಲ್ಕು ಸಾರಿಗೆ ನಿಗಮಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್ / ಶಕ್ತಿ ಸ್ಮಾರ್ಟ್ ದತ್ತಾಂಶ ಆಧರಿಸಿ ಭರಿಸಲಿದೆ.