
ಕಲಬುರಗಿ:ಮಾ.9: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಲಬುರಗಿ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಲಬುರಗಿ, ನೂತನ ವಿದ್ಯಾಲಯ ನೂತನ ವಿದ್ಯಾಲಯ ಜಿಮ್ಬಾನ ಇವುಗಳ ಸಂಯುಕ್ತಾಶ್ರಯದಲ್ಲಿ 19 ವರ್ಷದೊಳಗಿನ ಯುವತಿಯರಿಗಾಗಿ ಕಲಬುರಗಿ ಎನ್. ವ್ಹಿ. ಮೈದಾನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಮತ್ತು ಮಹಿಳೆಯರಿಗಾಗಿ ಹಗ್ಗ ಜಗ್ಗಾಟದ ಸ್ಪರ್ಧೆಗೆ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ ಡಿ. ಬದೋಲೆ ಅವರು ಗುರುವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಬಿ. ಗಾಯಿತ್ರಿ, ಜಿಲ್ಲಾ ಕಾರ್ಯಕ್ರಮ ನಿರ್ಮಾಣ ಅಧಿಕಾರಿ ಲೋಹಿತಿ, ಜಿಲ್ಲಾ ವ್ಯವಸ್ಥಾಪಕ ಅರುಣುಕುಮಾರ ಸೇರಿದಂತೆ ತುಕಾರಾಮ್, ಉಪಸ್ಥಿತರಿದ್ದರು.