ಮಹಿಳೆಯರ ಬಗ್ಗೆ ಅವಹೇಳನ ಹೇಳಿಕೆ: ಬಿಜೆಪಿ ಹಾಗೂ ಜೆಡಿಎಸ್‍ಗೆ ತಕ್ಕ ಪಾಠ ಕಲಿಸಿ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ.16- ಗ್ಯಾರಂಟಿ ಯೋಜನೆ ಜಾರಿಯಿಂದ ಗ್ರಾಮೀಣ ಮಹಿಳೆಯರು ಹಾಳಾಗುತ್ತಿದ್ದಾರೆ ಎಂಬ ಹೇಳಿಕೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಡಿ.ಕೆ. ಕುಮಾರಸ್ವಾಮಿ ಹಾಗೂ ಬಿಜೆಪಿ ಮುಖಂಡರಿಗೆ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಶಾಸಕ ಗಣೇಶ ಪ್ರಸಾದ್ ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಅವರು, ಎರಡು ಭಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿರುವ ಕುಮಾರಸ್ವಾಮಿ ಅವರಿಂದ ಇಂಥ ಕೀಳು ಮಟ್ಟದ ಹೇಳಿಕೆಯನ್ನು ನಿರೀಕ್ಷೆ ಮಾಡಿರಲಿಲ್ಲ.
ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ಹಾಳಾಗುತ್ತಿದ್ದಾರೆ ಎಂದು ತುಮಕೂರು ಸಭೆಯಲ್ಲಿ ಹೇಳಿರುವುದು ಮಹಿಳೆಯರಿಗೆ ಮಾಡಿದ ಅಪಮಾನವಾಗಿದೆ ಎಂದರು.
ಇದು ಬಿಜೆಪಿ ಹಾಗೂ ಜೆಡಿಎಸ್ ಸಂಸ್ಕøತಿಯನ್ನು ಬಿಂಬಿಸುತ್ತಿದೆ. ಮಹಿಳೆಯನ್ನು ಪೂಜ್ಯ ಭಾವನೆಯಿಂದ ನೋಡುವುದು ನಮ್ಮ ಸಂಸ್ಕøತಿ ಪರಂಪರೆಯಾಗಿದೆ.
ಇಂಥ ಹೇಳಿಕೆ ನೀಡಿರುವ ಕುಮಾರಸ್ವಾಮಿ ಮಹಿಳೆಯರ ಕ್ಷಮೆಯಾಚಿಸಿದರು ಸಹ ಯಾವ ಅರ್ಥದಲ್ಲಿ ಅವರು ಮಾತನಾಡಿದ್ದಾರೆ. ಅವರು ಮನಸ್ಸಿನಲ್ಲಿರುವುದನ್ನೇ ಹೇಳಿದ್ದಾರೆ.
ಈ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ಮಹಿಳೆಯರು ತಿರಸ್ಕರಿಸುವ ಮೂಲಕ ತಕ್ಕ ಉತ್ತರ ನೀಡಬೇಕು. ಈ ಬಗ್ಗೆ ಮಹಿಳಾ ಸಂಘಟನೆಗಳು ಹಾಗೂ ಮಹಿಳೆಯರು ಎಚ್ಚೆತ್ತು ಅಭಿಯಾನÀ ಮೂಲಕ ಜಾಗೃತಿ ಮೂಡಿಸಬೇಕು ಎಂದರು.