ಮಹಿಳೆ ಜೊತೆ ಅಸಭ್ಯ ವರ್ತನೆ: ಆರೋಪಿ ಸೆರೆ

ಪುತ್ತೂರು, ಜು.೧೮- ವಿವಾಹಿತ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ದೂರಿನ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್‌ನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ರವಿವಾರ ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಕುರಿಕ್ಕಾರ ನಿವಾಸಿ ವಿದೀಪ್ ಕುಮಾರ್ ಬಂಧಿತ ಆರೋಪಿ. ಈತ ಕಾವುನಲ್ಲಿರುವ ಸಂಸ್ಥೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿ ಕೊಂಡಿದ್ದಾನೆ. ಅದೇ ಸಂಸ್ಥೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ವಿವಾಹಿತ ಮಹಿಳೆ ಶನಿವಾರ ಸಂಜೆ ತನ್ನ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ  ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿದ ವಿದೀಪ್ ಕುಮಾರ್ ಆಕೆಯನ್ನು ತಡೆದು ಅಸಭ್ಯವಾಗಿ ವರ್ತಿಸಿದ್ದು, ಬಳಿಕ ಜನರು ಬರುತ್ತಿರುವುದನ್ನು ಕಂಡು ತನ್ನ ಬೈಕ್‍ನಲ್ಲಿ ಹೊರಟು ಹೋಗಿರುವುದಾಗಿ ಮಹಿಳೆ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಕೊಂಡಿರುವ ಪೊಲೀಸರು ಆರೋಪಿ ವಿದೀಪ್ ಕುಮಾರ್ ನನ್ನು ಬಂಧಿಸಿದ್ದಾರೆ.