ಕಲಬುರಗಿ,ಜೂ.18-ಅತ್ಯಾಚಾರವೆಸಗಿ ಆ ದೃಶ್ಯವನ್ನು ಮೊಬೈಲ್ ಸೆರೆ ಹಿಡಿದು 1 ಲಕ್ಷ ರೂ.ನೀಡಿದರೆ ಮಾತ್ರ ಮೊಬೈಲ್‍ನಲ್ಲಿ ಸೆರೆ ಹಿಡಿದಿರುವ ಚಿತ್ರಗಳನ್ನು ಅಳಿಸಿ ಹಾಕುವುದಾಗಿ ಮಹಿಳೆಯೊಬ್ಬರಿಗೆ ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆ ಬ್ಲ್ಯಾಕ್‍ಮೇಲ್ ಮಾಡುತ್ತಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಈ ಸಂಬಂಧ ನೊಂದ ಮಹಿಳೆ ದೇವಿ ನಗರದ ಮಶಪ್ಪ ತಂದೆ ಗುರಪ್ಪ (35), ಭೀಮಬಾಯಿ ಮತ್ತು ಇನ್ನೋರ್ವ ವ್ಯಕ್ತಿಯ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾಳೆ. ಅಲ್ಲದೆ ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದಾಳೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.