
ದಾವಣಗೆರೆ. ಏ.೨೨; 2023ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮಾಗನೂರು ಬಸಪ್ಪ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು.ಪೂಜ. ಬಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 591 ಅಂಕಗಳನ್ನು ಗಳಿಸುವ ಮೂಲಕ ದಾವಣಗೆರೆ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ 6ನೇ ರ‍್ಯಾಂಕ್ ಪಡೆದಿರುತ್ತಾಳೆ. ಕು. ತೇಜು ಪಿ 586 ಅಂಕಗಳನ್ನು ಗಳಿಸಿ ಕಾಲೇಜಿಗೆ ದ್ವಿತೀಯ ಸ್ಥಾನವನ್ನು, ಕು. ಅಮೀನ ಜಿ 583 ಅಂಕಗಳನ್ನು ಗಳಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ, ರುದ್ರೇಶ್ ಎಂ.ಎಸ್ 582, ಕು. ಸಾನ್ವಿ ಎಂ 581 ಮತ್ತು ಕು. ಸೀಮಾ ಜಿ.ಆರ್ 580 ಅಂಕಗಳನ್ನು ಪಡೆದಿರುತ್ತಾರೆ. ಈ ವರ್ಷ ಕಾಲೇಜಿನಿಂದ 196 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, 195 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 114 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು, 20 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಗಳಿಸಿರುತ್ತಾರೆ.ಅತ್ಯುತ್ತಮ ಫಲಿತಾಂಶವನ್ನು ನೀಡುವ ಮೂಲಕ ಕಾಲೇಜಿನ ಕೀರ್ತಿಯನ್ನು ದಾವಣಗೆರೆ ಜಿಲ್ಲೆ ಹಾಗೂ ರಾಜ್ಯ ಮಟ್ಟಕ್ಕೆ ವ್ಯಾಪಿಸುವಂತೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಸಂಗಮೇಶ್ವರ ಗೌಡರು, ಕಾಲೇಜಿನ ನಿರ್ದೇಶಕರಾದ ಡಾ.ಜಿ.ಎನ್.ಹೆಚ್.ಕುಮಾರ್, ಪ್ರಾಚಾರ್ಯರಾದ ಡಾ. ಪ್ರಸಾದ್ ಬಂಗೇರ ಎಸ್ ಅವರು ಹಾಗೂ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿಯವರು ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.