ಮಾಗಳದಲ್ಲಿ ಆಂಜನೇಯ ರಥೋತ್ಸವ


ಸಂಜೆವಾಣಿ ವಾರ್ತೆ
ಹೂವಿನಹಡಗಲಿ: ತಾಲೂಕಿನ ಮಾಗಳ ಗ್ರಾಮದಲ್ಲಿ ಆಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ಭವ್ಯ ಮೆರವಣಿಗೆಯಲ್ಲಿ ಕರೆತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವ ಪ್ರಾರಂಭವಾಯಿತು. ಮಾಗಳ ಸುತ್ತಮುತ್ತಲ ಗ್ರಾಮಗಳ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.
ದೇವಸ್ಥಾನದಲ್ಲಿ ಬೆಳಿಗ್ಗೆ ಆಂಜನೇಯ ಸ್ವಾಮಿಗೆ ಅಭಿಷೇಕದೊಂದಿಗೆ ಎಲೆ ಪೂಜೆ, ಕುಂಕುಮ ಪೂಜೆ ನೆರವೇರಿಸಲಾಯಿತು.

One attachment • Scanned by Gmail