ಮಾಚಿದೇವರು ಬಸವಣ್ಣರ ಸಮಕಾಲೀನ ಶರಣರು

ಶಿಡ್ಲಘಟ್ಟ.ಫೆ,೨:ನಾಡಿಗೆ ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತವಾದ ಕಾಣಿಕೆ ನೀಡಿದ್ದು, ೧೨ನೇ ಶತಮಾನದ ಕಾಲದಲ್ಲಿ. ಇಂತಹ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ನಗರದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಆಚರಣೆಯನ್ನು ಹಮ್ಮಿಕೊಂಡಿದ್ದು ದೀಪ ಬೆಳಗಿಸಿ ಮಾತನಾಡಿ
ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿ ಸತ್ಯ ಶುದ್ಧ ಕಾಯಕ ಕೊಟ್ಟವರಾಗಿದ್ದಾರೆ. ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ. ಮಾಚಿದೇವರು
ಸಮಾಜಕ್ಕೆ ಅವರ ಜೀವನವು ಮಾದರಿಯಾಗಿದೆ ಇಂದಿನ ಯುವಕರು ಆದರ್ಶವಾಗಿ ತೆಗೆದುಕೊಳ್ಳುವಂತವರಾಗಬೇಕು ಎಂದರು.
೧೨ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ .ಅಂತಹ ಮಹಾ ಪುರುಷರ ನೆನಪಿನಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹೆಚ್ಚಿನ ವಿದ್ಯಾಭ್ಯಾಸ ಮಾಡುವಂತಹ ಮಕ್ಕಳಿಗೆ ಪ್ರೋತ್ಸಾಹ ನೀಡುವಂತವ ಕೆಲಸವಾಗಲಿ ಎಂದು ತಹಶೀಲ್ದಾರ್ ಬಿ.ಎನ್.ಸ್ವಾಮಿ ತಿಳಿಸಿದರು.
ಮಡಿವಾಳ ಮಾಚೀದೇವರ ಸಮಾಜದ ಮಕ್ಕಳು ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ತಹಶೀಲ್ದಾರ್ ಸ್ವಾಮಿಯವರಿಂದ ವಿದ್ಯಾಭ್ಯಾಸಕ್ಕೆ ಸಹಾಯವಾಗಲಿರುವ ನಾಲೆಡ್ಜ್ ಪುಸ್ತಕ ಮತ್ತು ಶಾಸಕರಿಂದ ಪ್ರೋತ್ಸಾಹ ಧನ ನೀಡಿ ಗೌರವಿಸಿದರು.
ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಡಾ ವೆಂಕಟೇಶ್ ಮೂರ್ತಿ, ನಗರಠಾಣೆ ಪಿ ಎಸ್ ಐ ವೇಣುಗೋಪಾಲ್, ಶ್ರೀ ಮಡಿವಾಳ ಮಾಚೀದೇವ ಕ್ಷೇಮಾಭಿವೃದ್ಧಿ ಸಂಘದ ಕೃಷ್ಣಪ್ಪ, ಮುನಿರಾಜು, ಸಮಾಜ ಬಂದುಗಳು ಹಾಜರಿದ್ದರು.