ಮಾಜಿ ಕೇಂದ್ರ ಸಚಿವ ಬೂಟಾ ಸಿಂಗ್ ನಿಧನ


ನವದೆಹಲಿ ಜನವರಿ ೨. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಬೂಟಾಸಿಂಗ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ ೮೬ ವರ್ಷ ವಯಸ್ಸಾಗಿತ್ತು.ಸಿಂಗ್ ಅವರು ಮೊದಲ ಬಾರಿಗೆ ಸಡ್ನಾ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದರು ಆಯ್ಕೆಯಾಗಿದ್ದರು. ಜವಾಹರಲಾಲ್ ನೆಹರು ಪ್ರಧಾನಮಂತ್ರಿ ಆಗಿದ್ದ ಸಂದರ್ಭ ದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ಗುರು ತಿಸಿಕೊಂಡಿದ್ದರು.
ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರಿಗೆ ನಿಕಟವರ್ತಿಯಾಗಿದ್ದತು. ಅಕಾಲಿದಳದ ಸದಸ್ಯರಾಗಿ ಮೊದಲು
ಚುನಾವಣೆ ಎದುರಿಸಿದ ಬೂಟಾಸಿಂಗ್ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಯಾಗಿದ್ದರು.
ರಾಜೀವ್ ಗಾಂಧಿ ಪ್ರಧಾನಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಬೂಟಾ ಸಿಂಗ್ ಅವರು ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು.
ಪ್ರಧಾನಿ ಸಂತಾಪ
ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಬೂಟಾಸಿಂಗ್ ಅವರ ನಿಧನಕ್ಕೆನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬೂಟಾಸಿಂಗ್ ಅವರು ಅನು ಭವಿ ಆಡಳಿತಗಾರರಾಗಿದ್ದರು. ಬಡವರ ಹಾಗೂ ದೀನದಲಿತರ ಉದ್ಧಾರಕ್ಕಾಗಿಅಪಾರವಾಗಿ ಶ್ರಮಿಸಿದ್ದರು ಎಂದು ಪ್ರಧಾನಿ ಸ್ಮರಿಸಿದ್ದಾರೆ. ಅವರ ನಿಧಾನ ತಮಗೆ ನೋವುಂಟು ಮಾಡಿದೆ.ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ಭಗವಂತ ದಯಪಾಲಿಸಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಪಕ್ಷದ ಹಿರಿಯ ನಾಯಕ ಬೂಟಾಸಿಂಗ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.