ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮದಿನ ಆಚರಣೆ

ಮಾಲೂರು.ನ೨೦ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ದಿ.ಮಾಜಿ ಪ್ರಧಾನಿ ಇಂದಿರಾಗಾಂಧಿ ಹಾಗೂ ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ಅವರ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಅರ್ಪಿಸಿ ಹುಟ್ಟು ಹಬ್ಬವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಟಿ.ಮುನಿಯಪ್ಪ ಮಾತನಾಡಿ ದಿ.ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಪ್ರಥಮ ಮಹಿಳಾ ಪ್ರಧಾನ ಮಂತ್ರಿಗಳಾಗಿ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅದೇ ರೀತಿ ದೀನ ದಲಿತರು, ಬಡವರ್ಗದ ಜನತೆಗೆ ಹಲವಾರು ಜನಪರ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದಾರೆ. ಅಲ್ಲದೆ ಸಾಮಾಜಿಕ ನ್ಯಾಯಾವನ್ನು ಒದಗಿಸಿದ್ದರು. ಅವರ ನೇತೃತ್ವದಲ್ಲಿ ಕಾಂಗ್ರಸ್ ಪಕ್ಷವು ಕೇಂದ್ರದಲ್ಲಿ ಆಡಳಿತ ನಡೆಸಿದೆ.
ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಸಹ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಲು ಶ್ರಮಿಸಿದ್ದರು. ಇಂದಿರಾಗಾಂಧಿ ಅವರು ದೇಶದ ಅಭಿವೃದ್ಧಿಗೆ ತಮ್ಮದೆ ಆದಂತಹ ಕೊಡುಗೆಗಳನ್ನು ನೀಡಿದ್ದು, ಪ್ರತಿಯೊಬ್ಬರು ಅವರು ಆದರ್ಶಗಳನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗುವಂತೆ ತಿಳಿಸಿದ ಅವರು ಶಾಸಕ ಕೆ.ವೈ.ನಂಜೇಗೌಡ ಅವರು ಇಂದಿರಾಗಾಂಧಿ ಅವರ ಆದರ್ಶಗಳನ್ನು ರಾಜಕೀತ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ತಾಲೂಕಿನ ಅಭಿವೃದ್ಧಿಯ ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಅವರ ನೇತೃತ್ವದಲ್ಲಿ ಮುಂಬರುವ ಗ್ರಾ.ಪಂ. ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಗ್ರಾ.ಪಂ.ಗಳಲ್ಲಿ ಹೆಚ್ಚಿನ ಸದಸ್ಯೆರನ್ನು ಗೆಲ್ಲಿಸುವ ಮೂಲಕ ಆಡಳಿತ ನಡೆಸಲಿದೆ.
ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ವೀರ ಸೇನಾನಿಯಂತೆ ಬ್ರೀಟಿಷರ ವಿರುದ್ಧ ಹೋರಾಟವನ್ನು ನಡೆಸಿದ್ದರು. ಅವರು ದೇಶ ಪ್ರೇಮ, ದೈರ್ಯ, ಸಾಹಸ ಪ್ರತಿಯೊಬ್ಬ ಮಹಿಳೆಗೂ ಮಾರ್ಗದರ್ಶಕವಾಗಿದೆ. ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿವರ್ಷ ಇಂದಿರಾಗಾಂಧಿ ಅವರ ಜನ್ಮದಿನ ಹಾಗೂ ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ಅವರು ಜನ್ಮದಿನವನ್ನು ಆಚರಿಸಲಾಗುತ್ತಿದೆ ಎಂದರು.
ಪುರಸಭಾ ಅಧ್ಯಕ್ಷ ಎನ್.ವಿ.ಮುರಳಿಧರ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ರತ್ನಮ್ಮ, ಕೆಡಿಪಿ ಮಾಜಿ ಸದಸ್ಯ ವಿಜಯನರಸಿಂಹ, ಪುರಸಭಾ ಮಾಜಿ ಸದಸ್ಯರಾದ ಮಧುಸೂಧನ್, ಅಶ್ವಥರೆಡಿ, ಕಾಂಗ್ರೆಸ್ ಯುವಘಟಕದ ಅಧ್ಯಕ್ಷ ನವೀನ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ಪ್ರವೀಣ್, ಇನ್ನಿತರರು ಇದ್ದರು.