ಮಾಜಿ ಪ್ರಧಾನಿ ಡಾ. ಸಿಂಗ್ ಗೆ ಕೊರೋನಾ

ನವದೆಹಲಿ, ಏ.19- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಸೋಂಕು ಇರುವುದು ಖಚಿತವಾಗುತ್ತಿದ್ದಂತೆ‌ ದೆಹಲಿಯ ಅಖಿಲ ಭಾರತೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದಾರೆ

ಸಂಜೆ 5 ಗಂಟೆ ಸುಮಾರಿಗೆ ಏಮ್ಸ್‌ಆಸ್ಪತ್ರಗೆ ದಾಖಲಾಗಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

88 ವರ್ಷದ ಡಾ ಮನಮೋಹನ್ ಸಿಂಗ್ ಅವರಿಗೆ ಸೋಂಕು ದೃಢಪಡುತ್ತಿದ್ದಂತೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಅವರ ಸಂಪರ್ಕ ಬಂದವರು ಸೋಂಕು ಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.