ಮಾಜಿ ಪ್ರಧಾನಿ ನವಾಜ್ ಪಾಕ್‌ಗೆ ಮರಳಲು ಸಿದ್ಧತೆ

ಲಾಹೋರ್,ನ. ೧೬- ಪಾಕಿಸ್ತಾನದಲ್ಲಿ ಪ್ರಧಾನಮಂತ್ರಿ ಇಮ್ರಾನ್ ಖಾನ್ ಮತ್ತು ಅಲ್ಲಿನ ಸೇನೆಯ ನಡುವೆ ಅಧಿಕಾರಕ್ಕಾಗಿ ಜಟಾಪಟಿ ನಡೆದಿರುವ ನಡುವೆಯೇ ಮಾಜಿ ಪ್ರಧಾನಿ ನವಾಜ್ ಷರೀಫ್ ಪಾಕಿಸ್ತಾನಕ್ಕೆ ಮರಳಲು ವೇದಿಕೆ ಸಿದ್ಧವಾಗಿದೆ.
ಇಮ್ರಾನ್ ಖಾನ್ ಅವರನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ವಿರುದ್ಧ ಹೊರಡಿಸಲಾಗಿದ್ದ ರೆಡ್ ಕಾರ್ಪೆಟ್ ಹಿಂಪಡೆಯಲು ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಾಜಿ ಪ್ರಧಾನಿ ನವಾಜ್ ಶರೀಫ್ ಅವರು ಇಂಗ್ಲೆಂಡ್‌ನಲ್ಲಿ ಇದ್ದಾರೆ ಅವರು ಮರಳಿ ಪಾಕಿಸ್ತಾನಕ್ಕೆ ಬರಲು ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ.
ನವಾಜ್ ಷರೀಫ್ ವಿರುದ್ಧ ಎರಡು ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿದ್ದು ೨೦೧೯ರಲ್ಲಿ ಇಸ್ಲಾಮಾಬಾದ್ ಹೈಕೋರ್ಟ್ ಮುಂದೆ ಹಾಜರಾಗಲು ನಿರಾಕರಿಸಿ ಇಂಗ್ಲೆಂಡ್‌ನಲ್ಲಿ ಇದ್ದಾರೆ.
ನವಾಜ್ ಷರೀಫ್ ವಿರುದ್ಧ ಹತ್ತು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಇಂಗ್ಲೆಂಡ್ ನಲ್ಲಿ ಇರುವ ನವಾಜ್ ಷರೀಫ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ.
ಮಾಜಿ ಪ್ರಧಾನಿ ನವಾಜ್ ಷರೀಫ್ ವಿರುದ್ಧ ದಾಖಲಾಗಿರುವ ದೂರುಗಳನ್ನು ಹಾಗೂ ಶಿಕ್ಷೆಯ ಪ್ರಮಾಣ ತೆಗೆದುಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ. ಹಾಗೊಂದು ವೇಳೆ ಆದರೆ ನವಾಜ್ ಷರೀಫ್ ಪಾಕಿಸ್ತಾನಕ್ಕೆ ಮರಳಲಿದ್ದು ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಎಲ್ಲ ಸಿದ್ಧತೆಗಳು ನಡೆದಿವೆ.