ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಮನೂರಿನಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ , ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಮಾಜಿ ಸಚಿವರಾದ ಡಾ.ಶಾಮನೂರು ಶಿವಶಂಕರಪ್ಪನವರು, ಎಸ್ .ಎಸ್. ಮಲ್ಲಿಕಾರ್ಜುನ್, ಜಮೀರ್ ಅಹ್ಮದ್ ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಹಾಗೂ ಕಾರ್ಯಕರ್ತರು ಇದ್ದರು.