ಮಾಜಿ ಸಂಸದ ಶಹಾಬುದ್ದಿನ್ ಕೊರೊನಾಗೆ ಬಲಿ

ನವದೆಹಲಿ,ಮೇ.೧-ಕೊರೊನಾ ಸೋಂಕಿಗೆ ಒಳಗಾಗಿದ್ದ ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ಮಾಜಿ ಸಂಸದ ಮೊಹಮ್ಮದ್ ಶಹಾಬುದ್ದಿನ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅವರು ಇಲ್ಲಿನ ತಿಹಾರ್ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದರು.
ಕೋವಿಡ್ ಸೋಂಕಿಗೆ ಒಳಗಾಗಿದ್ದ ಅವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ನಿನ್ನೆ ಸೂಚನೆ ನೀಡಿತ್ತು.
ಅದರಂತೆ ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
೨೦೦೪ ರಲ್ಲಿ ಶಹಾಬುದ್ದಿನ್ ತನ್ನ ಸಹಚರರು ಜತೆ ಸೇರಿ ಸಹೋದರರಾದ ಗಿರೀಶ್ ಮತ್ತು ಸತೀಶ್ ಎಂಬುವರ ಮೇಲೆ ಆಸಿಡ್ ಸುರಿದು ಬರ್ಬರವಾಗಿ ಹತ್ಯೆ ಮಾಡಿದ್ದರು.
ಶಹಾಬುದ್ದಿನ್ ಮೇಲಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ೨೦೧೭ರಲ್ಲಿ ನ್ಯಾಯಾಲಯ ಜೀವಾಧಿ ಶಿಕ್ಷೆ ನೀಡಿತ್ತು.