ಮಾಜಿ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ ಖಂಡನೀಯ : ಕೊಳ್ಳುರ ವಾಗ್ದಾಳಿ

ಔರಾದ :ಆ.6: ಮಾಜಿ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರಬಲ ಲಿಂಗಾಯತ ನಾಯಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರ ಬಗ್ಗೆ ಬಹಳ ಹಗುರವಾಗಿ ಮತ್ತು ಅವಮಾನಿಸುವ ರೀತಿ ಮಾತನಾಡಿರುವುದನ್ನು ಕಾಂಗ್ರೆಸ್ ಮುಖಂಡ ಸುಧಾಕರ್ ಕೊಳ್ಳುರ ಅವರು ತೀವ್ರವಾಗಿ ಖಂಡಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೆÇೀಷಿಸುತ್ತಿರುವುದು ನಿಜಕ್ಕೂ ದುರ್ದೈವದ ಸಂಗತಿ.

ನಮ್ಮ ಭಾಗದ ಜನರು ಸುಟ್ಟು ಕರಕಲಾಗಿರುತ್ತಾರೆ ಖರ್ಗೆ ಅವರನ್ನು ನೋಡಿದರೆ ಇದು ಗೊತ್ತಾಗುತ್ತದೆ ಎಂದು ಹೇಳುವ ಮೂಲಕ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮತ್ತು ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಷ್ಟೇ ಅಲ್ಲದೆ ರಾಜ್ಯದ ಅದರಲ್ಲೂ ಇಡೀ ಕಲ್ಯಾಣ ಕರ್ನಾಟಕದ ಜನತೆಗೆ ಅವಮಾನ ಮಾಡಿದ್ದಾರೆ ಇದು ಮಾಜಿ ಸಚಿವರ ಘನತೆಗೆ ಶೋಭೆ ತೋರುವುದಿಲ್ಲ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ, ಈ ರೀತಿ ನಾಡಿನ ಒಂದು ಕಾಲು ಕೋಟಿ ಜನತೆಗೆ ಅವಮಾನ ಮಾಡಿರುವುದು ನಿಜಕ್ಕೂ ದುರ್ದೈವ ವೆಂದು ಕಾಂಗ್ರೆಸ್ ಮುಖಂಡ ಸುಧಾಕರ್ ಕೊಳ್ಳುರ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಪ್ರಬಲ ನಾಯಕರ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಅರಣ್ಯ ಖಾತೆ ಸಚಿವರಾದ ಈಶ್ವರ ಖಂಡ್ರೆ ಅವರ ಬಗ್ಗೆಯೂ ಹಗುರವಾಗಿ ಮಾತನಾಡಿದ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರು ತಮ್ಮ ಮೂರ್ಖ ಬುದ್ದಿ ತೋರಿಸಿದ್ದಾರೆ, ತಾನು ಹೇಳಿದ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡು ನಾನು ಖಂಡ್ರೆ ಯವರ ಬದಲು ಖರ್ಗೆ ಎಂದಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದುಕೊಂಡಿರುವ ಅರಗ ಜ್ಞಾನೇಂದ್ರ ಅವರ ಮನಸ್ಥಿತಿ ನೋಡಿದರೆ ಗೊತ್ತಾಗುತ್ತದೆ ಖಂಡ್ರೆ ಅವರ ಬೆಳವಣಿಗೆ ಸಹಿಸಿಕೊಳ್ಳದೆ ವಿಚಲಿತರಾಗಿದ್ದಾರೆ ಎಂದು.

ಕಲ್ಯಾಣ ಕರ್ನಾಟಕ ಭಾಗದ ಪ್ರಬಲ ಲಿಂಗಾಯತ ಸಮುದಾಯದ ನಾಯಕ ಈಶ್ವರ್ ಖಂಡ್ರೆ ಅವರು ಇಡೀ ರಾಜ್ಯಮಟ್ಟದಲ್ಲಿ ಒಳ್ಳೆ ಕೆಲಸ ಮಾಡಿ ಹೆಸರು ಮಾಡುತ್ತಿದ್ದಾರೆ ಅವರ ಬೆಳವಣಿಗೆ ಸಹಿಸಿಕೊಳ್ಳದೆ ಬಿಜೆಪಿಯವರಿಗೆ ಖಂಡ್ರೆ ವಿರುದ್ಧ ಮಾತನಾಡಲು ಯಾವುದೇ ಸಣ್ಣ ತಪ್ಪು ಹುಡುಕಲು ಸಾಧ್ಯವಾಗುತಿಲಾ ಹಾಗಾಗಿ ಅವರ ಮೈಬಣ್ಣದ ಬಗ್ಗೆ ಹಗುರವಾಗಿ ಮಾತನಾಡು ತಿದ್ದರೆ ಎಂದು ಬೀದರ್ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಹ ಸಂಚಾಲಕ ಸುಧಾಕರ ಕೊಳ್ಳುರ ರವರು ತೀವ್ರವಾಗಿ ಮಾಜಿ ಸಚಿವ ಅರಗ ಜ್ಞಾನೇಂದ್ರ ಕ್ಷಮೆ ಯೋಚಿಸಬೇಕು ಎಂದು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.