ಮಾಜಿ ಸಚಿವ ಡಾ. ವೈ.ನಾಗಪ್ಪ ನಿಧನ

ದಾವಣಗೆರೆ.ಅ.೨೭; ಮಾಜಿ ಸಚಿವ ಡಾ. ವೈ ನಾಗಪ್ಪ (೮೭) ಇಂದು ಬೆಳಗ್ಗೆ ೮.೦೨ ಕ್ಕೆ ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಹರಿಹರ ವಿಧಾನ ಸಭಾ ಕ್ಷೇತ್ರದಲ್ಲಿ ೧೯೮೯. ೧೯೯೯ ಹಾಗೂ ೨೦೦೪ ಸೇರಿದಂತೆ ಒಟ್ಟು ಮೂರು ಶಾಸಕರಾಗಿ ೨೦೦೪ ರಲ್ಲಿ ಕಾಂಗ್ರೆಸ್,ಜೆಡಿಎಸ್ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ೨೦೦೮ ರಲ್ಲಿ ಮತ್ತೆ ಹರಿಹರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡರು. ನಂತರ ಬದಲಾದ ರಾಜಕೀಯದಿಂದ ಮತ್ತು ಅನಾರೋಗ್ಯದಿಂದ ರಾಜಕಾರಣದಿಂದ ತೆರೆಮರೆಗೆ ಸರಿದ ಡಾ. ವೈ ನಾಗಪ್ಪ ಹರಿಹರ ತಾಲೂಕಿನಲ್ಲಿ ಶೋಷಿತ ಜನಾಂಗಗಳ ನಾಯಕರಾಗಿ ಧ್ವನಿಯಾಗಿದ್ದವರು. ಡಾ. ವೈ ನಾಗಪ್ಪನವರ ರಾಜಕಾರಣಕ್ಕೆ ಬಂದಿದ್ದು ಒಂದು ಆಕಸ್ಮಿಕ ೧೯೮೦ ರಲ್ಲಿ ಹರಿಹರ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆಗ ಶಾಸಕರಾಗಿದ್ದ ಹೆಚ್ ಶಿವಪ್ಪ ಇವರನ್ನು ಪದೇ ಪದೇ ವರ್ಗಾವಣೆ ಮಾಡಿಸಿದಾಗ ಇದಕ್ಕೆ ಬೇಸತ್ತು ಹಾಲಿ ಶಾಸಕನಿಗೆ ಸೆಡ್ಡು ಹೊಡೆದು ನೀನು ಮನಸ್ಸು ಮಾಡಿದರೆ ಡಾಕ್ಟರ್ ಆಗೋದಕ್ಕೆ ಆಗಲ್ಲ. ಆದರೆ ನಾನು ಮನಸ್ಸು ಮಾಡಿದರೆ ಎಂಎಲ್‌ಎ ಆಗುತ್ತೇನೆ ಎಂದು ರಾಜಕಾರಣಕ್ಕೆ ಧುಮುಕಿ ಅದೇ ಹೆಚ್ ಶಿವಪ್ಪ ವಿರುದ್ಧ ಮೂರು ಬಾರಿ ಶಾಸಕರಾಗಿ ಮಂತ್ರಿಗಳಾಗಿ ಕಾರ್ಯನಿರ್ವಹಿಸಿ ಹರಿಹರ ವಿಧಾನ ಸಭಾ ಕ್ಷೇತ್ರದ ಅಭಿವೃದ್ದಿ ಪರ್ವದೊಂದಿಗೆ ಶೋಷಿತ ತುಳಿತಕ್ಕೆ ಒಳಗಾದ ಜನರ ಮತ್ತು ಅಲ್ಪಸಂಖ್ಯಾತರ ಮನಸ್ಸುಲ್ಲಿ ಹಚ್ಚಾಗಿ ಉಳಿದಿದ್ದಾರೆ. ಮೃತರು ಒಬ್ಬ ಪುತ್ರ ಮೂವರು ಹೆಣ್ಣುಮಕ್ಖಳು ಮೊಮ್ಮಕ್ಕಳು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರೀಯೆ ಇಂದು ಸಂಜೆ ೫ ಗಂಟೆಗೆ ಹರಿಹರದಲ್ಲಿ ನಡೆಯಲಿದೆ.
ಸಂತಾಪ; ಡಾ.ವೈ ನಾಗಪ್ಪ ನಿಧನಕ್ಕೆ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ್, ಮಾಜಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್, ಕೆಪಿಸಿಸಿ ವಕ್ತಾರ ಡಿ ಬಸವರಾಜ್ ಸಂತಾಪ ಸೂಚಿಸಿದ್ದಾರೆ.
೨೭ಡಿಪಿಹೆಚ್೧