ಮಾಜಿ ಸಿಎಂ ಎಚ್‌ಡಿಕೆ ಆಸ್ಪತ್ರೆಗೆ ದಾಖಲು

ಬೆಂಗಳೂರು,ಆ.೩೦:ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕ ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಿನ್ನೆ ತಡರಾತ್ರಿ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿದ್ದು, ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.
ಇತ್ತೀಚೆಗೆ ಎರಡು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಅವರು, ವಿಶ್ರಾಂತಿ ಇಲ್ಲದೆ ಬಳಲಿದ್ದು, ಸತತ ಪ್ರವಾಸದ ಹಿನ್ನೆಲೆಯಲ್ಲಿ ಜ್ವರ ಕಾಣಿಸಿಕೊಂಡಿತ್ತು, ಹಾಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.
ಆಸ್ಪತ್ರೆಯಲ್ಲಿರುವ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಆತಂಕ ಇಲ್ಲ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.