
ದಾವಣಗೆರೆ.ಮಾ.೭; ಚನ್ನಗಿರಿ ಶಾಸಕನ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಾಗಿನಿಂದ ಶಾಸಕರು ಕ್ಷೇತ್ರದಿಂದ ನಾಪತ್ತೆಯಾದ ಹಿನ್ನೆಲೆ ದಾವಣಗೆರೆ, ಚನ್ನಗಿರಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಮಾಡಾಳ್ ಮಿಸ್ಸಿಂಗ್ ಪೋಸ್ಟರ್ ಅಭಿಯಾನ ನಡೆಸುತ್ತಿದ್ದಾರೆ.ಲೋಕಾಯುಕ್ತ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಪ್ರಕರಣ ನಡೆದು 6 ದಿನವಾದರೂ ಪತ್ತೆ ಆಗಿಲ್ಲ. ಅವರನ್ನು ಹುಡುಕಿಕೊಡಿ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ನೇತೃತ್ವದಲ್ಲಿ ಪೋಸ್ಟರ್ ಅಂಟಿಸುವ ಅಭಿಯಾನ ನಡೆಸಲಾಗುತ್ತಿದೆ. ನಗರದ ಪ್ರಮುಖ ಬೀದಿಗಳಲ್ಲಿ ಮಿಸ್ಸಿಂಗ್ ಪೋಸ್ಟರ್ ಅಂಟಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಕಾಣೆಯಾದವರ ಪಟ್ಟಿ ಮಾದರಿಯಲ್ಲಿ ಪೋಸ್ಟರ್ ಅಂಟಿಸಿದ ಕಾಂಗ್ರೆಸ್, ಕೊನೆ ಬಾರಿ ಕಾಣಿಸಿಕೊಂಡಿದ್ದು ಸಿಎಂ ಕಚೇರಿಯಲ್ಲಿ. ಪತ್ತೆಯಾದರೆ ಪೊಲೀಸ್ ಹೆಲ್ಪ್ಲೈನ್ಗೆ ಕರೆ ಮಾಡುವಂತೆ ಮನವಿ ಪೋಸ್ಟರ್ನಲ್ಲಿ ಬರೆಯಲಾಗಿದೆ. ಮಾಡಾಳು ವಿರೂಪಾಕ್ಷಪ್ಪ ಅವರ ಎತ್ತರ, ವಯಸ್ಸು, ಮುಖ ಚಹರೆ,ನಾಪತ್ತೆ ದಿನಾಂಕ ಕೂಡ ಪೋಸ್ಟರ್ ನಲ್ಲಿ ಬರೆಯಲಾಗಿದೆ.