ಮಾಡಾಳ್ ಮಿಸ್ಸಿಂಗ್ ಕೈ ಅಭಿಯಾನ

ಬೆಂಗಳೂರು,ಮಾ.೭:ಕೆಎಸ್‌ಡಿಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕಾಂಗ್ರೆಸ್ ಪಕ್ಷ ಮಿಸ್ಸಿಂಗ್ ಅಭಿಯಾನ ನಡೆಸಿದೆ.
ಚೆನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಮಿಸ್ಸಿಂಗ್ ಎಂಬ ಪೋಸ್ಟರ್‌ಗಳನ್ನು ಕಾಂಗ್ರೆಸ್ ಬೆಂಗಳೂರಿನ ಹಲವೆಡೆ ಅಂಟಿಸಿದ್ದು, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಎ೧ ಆರೋಪಿ ಅವರ ವಯಸ್ಸು ೭೨, ಮೈ ಬಣ್ಣ ಗೋಧಿ ಬಣ್ಣ, ಕೊನೆಯ ಬಾರಿ ಕಾಣಿಸಿಕೊಂಡಿದ್ದು ಸಿಎಂ ಕಚೇರಿ. ಲೋಕಾಯುಕ್ತ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಈ ಎ೧ ಆರೋಪಿಯನ್ನು ದಯಮಾಡಿ ಹುಡುಕಿಕೊಡಿ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಭಾವಚಿತ್ರವನ್ನೊಳಗೊಂಡ ಪೋಸ್ಟರ್‌ಗಳನ್ನು ಕಾಂಗ್ರೆಸ್ ಹಲವೆಡೆ ಅಂಟಿಸಿದೆ.
ಎ೧ ಆರೋಪಿಯ ಬಗ್ಗೆ ಸುಳಿವು ಸಿಕ್ಕರೆ ಪೊಲೀಸ್ ಕಂಟ್ರೋಲ್ ರೂಂ ಗೆ ಮಾಹಿತಿ ನೀಡುವಂತೆಯೂ ಪೋಸ್ಟರ್‌ನಲ್ಲಿ ಹೇಳಲಾಗಿದೆ. ಬೆಂಗಳೂರು ಅಲ್ಲದೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಸ್ವಕ್ಷೇತ್ರ ಚನ್ನಗಿರಿಯಲ್ಲೂ ಪೋಸ್ಟರ್‌ಗಳನ್ನು ಹಾಕಲಾಗಿದೆ.