ಮಾತೃಭಾಷೆ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರದ್ದು


ದಾವಣಗೆರೆ,ನ.೨: ಕನ್ನಡ ಸಾವಿರಾರು ವರ್ಷಗಳ ಇತಿಹಾಸವಿರುವ ಭಾಷೆ. ಈ ತಾಯಿ ಭಾಷೆಯನ್ನು ಉಳಿಸಿ, ಬೆಳಸಿಕೊಂಡು ಹೋಗುವ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ಹೇಳಿದರು.
ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಹಾಗೂ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆ ಸಹಯೋಗದಲ್ಲಿ ಭಾನುವಾರ ನಗರದ ಸಿದ್ಧಗಂಗಾ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಂಡಿದ್ದ ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲಿ ಸಹಯೋಗದಲ್ಲಿ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಟಾನದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೧೨೫ಕ್ಕೆ ೧೨೫ ಅಂಕ, ೬೨೫ಕ್ಕೆ ೬೦೦ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಕನ್ನಡ ಕೌಸ್ತುಭ, ಸರಸ್ವತಿ ಪುರಸ್ಕಾರ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುರೋಪಿಯನ್ ದೇಶಗಳಲ್ಲಿ ಇಂಗ್ಲೀಷ್ ಭಾಷೆಗೆ ಮಾನ್ಯತೆಯೇ ನೀಡುವುದಿಲ್ಲ. ಆಯಾಯ ರಾಷ್ಟ್ರಗಳಲ್ಲಿ ಮಾತೃಭಾಷೆಗೆ ಮಹತ್ವ ನೀಡಿ, ಅದರಲ್ಲೇ ಅವರು ಪ್ರಗತಿಯನ್ನು ಕಾಣುತ್ತಿದ್ದಾರೆ.ಆದರೆ, ನಾವುಗಳು ಆಂಗ್ಲ ಭಾಷೆಯಿಂದಲೇ ಎಲ್ಲವನ್ನೂ ಸಾಧಿಸುತ್ತೇವೆ ಎಂಬ ಮನೋಭಾವನೆ ಹೊಂದಿದ್ದೇವೆ. ಅದರಿಂದ ನಾವುಗಳು ಹೊರಬರಬೇಕಿದೆ ಎಂದು ಹೇಳಿದರು.