ಮಾದಕ ದ್ರವ್ಯ ದುಷ್ಪರಿಣಾಮಗಳ ಕುರಿತು ವಿಚಾರ ಸಂಕಿರಣ

ಮೈಸೂರು,ಆ.1:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮಹಾರಾಜ ಕಾಲೇಜಿನ ಎನ್ ಎಸ್ ಎಸ್ ಘಟಕಗಳ ವತಿಯಿಂದ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಮದ್ಯಪಾನ, ಮಾದಕ ದ್ರವ್ಯ ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು.
ಇಂದು ಮಹಾರಾಜ ಕಾಲೇಜು ಜೂನಿಯರ್ ಬಿಎ ಹಾಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ್ ದೀಪಬೆಳಗುವ ಮೂಲಕ ಉದ್ಘಾಟಿಸಿದರು. ಇದೇ ವೇಳೆ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಮರ್ಪಿಸಿದರು. ಬಳಿಕ ಮಾತನಾಡಿದ ಅವರು 2022ರ ಜಾಗತಿಕ ಅಭಿಯಾನವು ಸಂಪೂರ್ಣ ತಂಬಾಕು ಪರಿಸರದ ಪ್ರಭಾವದ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಇದು ತಂಬಾಕು ಉತ್ಪನ್ನಗಳ ಕೃಷಿ ಉತ್ಪಾದನೆ ಮತ್ತು ವಿತರಣೆಯಿಂದ ಅದು ಉತ್ಪಾದಿಸುವ ವಿಷಕಾರಿ ತ್ಯಾಜ್ಯದವರೆಗೆ. ಈ ಅಭಿಯಾನವು ತಂಬಾಕು ಉದ್ಯಮವು ತನ್ನ ಖ್ಯಾತಿಯನ್ನು ಹಸಿರು ಬಣ್ಣಕ್ಕೆ ತರುವ ಪ್ರಯತ್ನವನ್ನು ಬಹಿರಂಗಪಡಿಸುವ ಗುರಿಯನ್ನು ಹೊಂದಿದೆ ಎಂದರು.
ಕೋಟ್ಪಾ ದಾಳಿಯಲ್ಲಿ ಇದುವರೆಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಒಟ್ಟು 6598ಪ್ರಕರಣಗಳಿಂದ 909790ರೂ.ಗಳ ದಂಡವನ್ನು ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು ವೈದ್ಯಕೀಯ ಸಂಶೋಧನಾ ಸಂಸ್ಥೆಯ ಮನೋರೋಗ ವಿಭಾಗದ ಮುಖ್ಯಸ್ಥರಾದ ಡಾ.ರವೀಶ್, ಮಹಾರಾಜ ಕಾಲೇಜು ಪ್ರಾಂಶುಪಾಲರಾದ ಪೆÇ್ರ. ಅನಿಟಾ ವಿಮಲಾ ಬ್ರಾಗ್ಸ್ ಮತ್ತಿತರರು ಉಪಸ್ಥಿತರಿದ್ದರು.