ಅಥಣಿ :ಜೂ.28: ಉತ್ತಮ ಸಮಾಜಕ್ಕೆ ನಿರ್ಮಾಣಕ್ಕೆ ಯುವ ಶಕ್ತಿಯೇ ಆಧಾರ ಸ್ತಂಭ. ಆದರೆ ಯುವಕರೇ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದನೀಯ ಸಂಗತಿ ಮಾದಕ ವಸ್ತುಗಳ ಸೇವನೆಯ ಚಟದಿಂದಾಗಿ ಯುವಕರು ತಪ್ಪು ದಾರಿ ಹಿಡಿಯುತ್ತಿದ್ದು.ಅದೇ ಹೆಮ್ಮರವಾಗಿ ಬೆಳೆದು ಸಮಾಜದ ಶಾಂತಿ ಕದಡುವ ಮಾರ್ಗವಾಗಿದೆ ಈ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಸಿಪಿಐ ರವೀಂದ್ರ ನಾಯ್ಕೋಡಿ ಹೇಳಿದರು,
ಅವರು ಸ್ಥಳೀಯ ಶ್ರೀ ಶಿವಯೋಗಿ ಮುರುಘೇಂದ್ರ ಸ್ವಾಮೀಜಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ರಾಜ್ಯ ಪೆÇೀಲಿಸ್ ಇಲಾಖೆ, ಅಥಣಿ ಇವುಗಳ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಸ್ತುಗಳ ಸೇವನೆ ವಿರೋಧಿ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ,
“ಮಾದಕ ದ್ರವ್ಯ ಸೇವನೆ ದುಷ್ಪರಿಣಾಮಗಳ ಅರಿವು” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಮಾದಕ ದ್ರವ್ಯ ಸೇವನೆಯಿಂದ ಎದುರಾಗುವ ಸಮಸ್ಯೆಗಳು ಮತ್ತು ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿ ಹಂತದಲ್ಲೇ ಅರಿವು ಮೂಡಿಸುವುದರಿಂದ ಅದನ್ನು ತಡೆಗಟ್ಟಲು ಸಾಧ್ಯವಾಗುವುದು
ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದೆ ತಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಬೇಕು ಹದಿ ಹರೆಯದ ವಯಸ್ಸಿನಲ್ಲಿಯೇ ಮಾದಕ ವಸ್ತುಗಳ ಸೇವನೆಯ ಮೋಹಕ್ಕೆ ಬಿದ್ದು ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು, ಸದೃಢ ದೇಶ ನಿರ್ಮಾಣದಲ್ಲಿ ಭಾಗಿಯಾಗಬೇಕು, ನಿಮ್ಮ ಆಸುಪಾಸಿನಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಿಮ್ಮ ಗಮನಕ್ಕೆ ಬಂದಲ್ಲಿ ನಮ್ಮ ಸಹಾಯವಾಣಿ 112 ಗೆ ಪೆÇೀನ್ ಮಾಡಿ ತಿಳಿಸಬೇಕಾಗಿದೆ ವಿನಂತಿಸಿದರು,
ಈ ವೇಳೆ ಅಥಣಿ ಪೆÇಲೀಸ್ ಠಾಣೆಯ ಪಿಎಸ್ ಐ ಶಿವಶಂಕರ ಮುಕರಿ ಮಾತನಾಡಿ ಮಾದಕ ವಸ್ತುಗಳ ಬಳಕೆ ಹಾಗೂ ಅಕ್ರಮ ಸಾಗಣೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜಾಗತಿಕವಾಗಿ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 26ರಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನವನ್ನು ಆಚರಿಸಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇದು ಸಮಾಜದ ಮೇಲೆ ಮತ್ತು ಕುಟುಂಬದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ವ್ಯಸನ ಮುಕ್ತ ಹಾಗೂ ಮಾದಕ ವಸ್ತುಗಳ ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸುವುದು ಅಗತ್ಯ ಎಂದು ಹೇಳಿದರು.
ಈ ವೇಳೆ ಕಾಲೇಜಿನ ಪ್ರಾಚಾರ್ಯರಾದ ಡಾ, ಬಿ ಎಸ್ ಕಾಂಬಳೆ, ಸಮನ್ವಯಾಧಿಕಾರಿ ಸಂಗಮೇಶ ತಳವಾರ, ಆರೋಗ್ಯ ಇಲಾಖೆಯ ಶ್ರೀಮತಿ ಗುರಿಕಾರ ಸೇರಿದಂತೆ ಕಾಲೇಜಿನ ವಿದ್ಯಾರ್ಥಿ/ ವಿಧ್ಯಾರ್ಥಿನಿಯರು ಉಪಸ್ಥಿತರಿದ್ದರು,