ಚಾಮರಾಜನಗರ, ಜೂ.27:- ಪ್ರಸ್ತುತ ದಿನಗಳಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣಿಕೆಯ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಅರಿವು ಅಗತ್ಯ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದರು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ ಜಾಥಾಗೆ ಚಾಲನೆ ನೀಡಿಅವರು ಮಾತನಾಡಿದರು.
ಒತ್ತಡದಜೀವನ ಹಾಗೂ ನೋವಿನ ದಿನಗಳಿಂದ ಹೊರಬರಲು ಮಾದಕ ವಸ್ತುಗಳಿಗೆ ಹೆಚ್ಚು ಬಲಿಯಾಗುತ್ತಿದ್ದಾರೆ. ಇತ್ತೀಚ್ಚಿನ ದಿನಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಹೆಚ್ಚಾಗಿ ಯುವಜನತೆಯು ಆಸಕ್ತಿ ತೋರುತ್ತಿರುವುದುಆಘಾತಕಾರಿ ವಿಷಯವಾಗಿದೆ. ಮಾದಕ ವಸ್ತುಗಳ ಸೇವನೆಯು ಹಲವಾರು ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂದೆ ಬೀಳುವ ಸಾಧ್ಯತೆಯು ಉಂಟು ಎಂದು ಹೇಳಿದರು.
ಮಾದಕ ವಸ್ತುಗಳ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಿ ಮಾದಕ ವ್ಯಸನಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು. ಸಾಧ್ಯವಾದಷ್ಟು ದುಶ್ಚಟಗಳಿಂದ ದೂರ ಉಳಿದು ಉತ್ತಮ ಆರೋಗ್ಯವಾದ ಜೀವನದ ಕಡೆ ಮುಖ ಮಾಡಬೇಕು. ಸಾರ್ವಜನಿಕರುತಮ್ಮ ಸುತ್ತಲಿನಲ್ಲಿ ಈ ರೀತಿಯ ಚಟುವಟಿಕೆಗಳು ಅರಿವಿಗೆ ಬಂದಾಗ ಸಂಬಂಧ ಪಟ್ಟವರಿಗೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್‍ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿಅವರು ಮಾತನಾಡಿ ದುಷ್ಚಟಗಳಿಂದ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದೆ. ದುಷ್ಚಟಗಳೆಂದರೆ ಕೇವಲ ಕುಡಿತವೊಂದೆ ಅಲ್ಲ. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳು ಕೂಡ ಒಂದು ದೊಡ್ಡಚಟವಾಗಿ ಪರಿಣಮಿಸಿದೆ. ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮೊಬೈಲ್ ಚಟಗಳಿಗೆ ಬಲಿಯಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು.
ಪೋಷಕರು ಮಕ್ಕಳ ಚಟುವಟಿಕೆಗಳ ಬಗ್ಗೆ ಹೆಚ್ಚು ಗಮನಹರಿಸಬೇಕು. ಸಾರ್ವಜನಿಕರ ಹಿತಕೋಸ್ಕರ ಜಾಗೃತಿ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದುಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಮತ್ತುಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಹಸಿರು ನಿಶಾನೆ ತೋರುವ ಮೂಲಕ ಜಾಥಾಗೆ ಚಾಲನೆ ನೀಡಿದರು.
ಜಾಥಾವು ಚಾಮರಾಜೇಶ್ವರ ದೇವಸ್ಥಾನದಿಂದ ಆರಂಭವಾಗಿಜೈ ಭುವನೇಶ್ವರಿ ವೃತ್ತ, ಬಿ. ರಾಚಯ್ಯ ಜೋಡಿ ರಸ್ತೆ ಮೂಲಕ ಸಾಗಿ ಜಿಲ್ಲಾಡಳಿತ ಭವನದ ಮುಂಭಾಗ ಮುಕ್ತಾಯವಾಯಿತು. ಸರ್ಕಾರಿ ನಸಿರ್ಂಗ್ ಶಾಲೆ, ಸರ್ಕಾರಿ ಪ್ರಥಮ ದರ್ಜೆಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆ, ಇತರೆ ಸಿಬ್ಬಂದಿಗಳು ಜಾಥಾದಲ್ಲಿ ಪಾಲ್ಗೊಂಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿಡಾ. ಚಂದ್ರಶೇಖರ್, ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿಡಾ. ನಾಗರಾಜು, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಡಾ. ಉಮಾರಾಣಿ, ಡಾ. ವಾಸು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್ ಇದ್ದರು.