
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಏ.05: ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ, ಡಾ.|| ಬಾಬು ಜಗಜೀವನ್ ರಾಮ್ ಅವರ ಜನ್ಮದಿನಾಚರಣೆಯ ಅಂಗವಾಗಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿ.ಸೋಮಶೇಖರ್ ನೇತೃತ್ವದಲ್ಲಿ ಜಗಜೀವನ್ ರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾದಿಗ ಮೀಸಲಾತಿ ಕಾರ್ಯಾಧ್ಯಕ್ಷ ಹೆಚ್.ತಿಪ್ಪೇಸ್ವಾಮಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಮಣ್ಣ ಚೇಳ್ಳಗುರ್ಕಿ, ಡಾ|| ಬಿ.ಆರ್.ಅಂಬೇಡ್ಕರ್ ಸಂಘದ ಸದಸ್ಯರಾದ ಕೆ.ಗಿರಿಮಲ್ಲಪ್ಪ, ಎನ್.ಡಿ.ವೆಂಕಮ್ಮ, ಹೆಚ್.ಶಿವರಾಜು, ಡಿ.ಮೋಹನ್ ದಾಸ್, ಡಿ.ಭೀಮದಾಸ್, ತಾಯಪ್ಪ, ರಾಯಚೂಟಿ, ಮುಂತಾದವರು ಉಪಸ್ಥಿತರಿದ್ದರು.