ಮಾಧ್ಯಮದಲ್ಲಿ ಸರಿಗನ್ನಡ ಬಳಸಲು ಮನವಿ

ಕಲಬುರಗಿ: ಮಾ. 27: ಮಾಧ್ಯಮದಲ್ಲಿ ಸರಿಗನ್ನಡ” ಕ್ಕೆ ಒತ್ತಾಯಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು ಪತ್ರಿಕಾಭವನದಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ನಂತರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ. ಜಿ. ಬಿ ಮತ್ತು ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಭವಾನಿಸಿಂಗ್ ಠಾಕೂರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ರಾಜ್ಯಸಮಿತಿ ಸದಸ್ಯರಾದ ಸುರೇಶ ಬಡಿಗೇರ, ಪ್ರಾಧಿಕಾರದ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾದ ಸ್ವಾಮಿರಾವ್ ಕುಲಕರ್ಣಿ ಆನಂದ ಸಿದ್ದಮಣಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಸಮಿತಿ ಸದಸ್ಯರಾದ ದೇವೀಂದ್ರಪ್ಪ ಕಪನೂರ, ಹಣಮಂತರಾವ್ ಭೈರಮಡಗಿ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ ಅವಂಟಿ ಹಾಗೂ ಗೋಪಾಲ ನಾಟಿಕಾರ, ಮಂಜುನಾಥ ನಾಲ್ವಾರಕರ್ ಸೇರಿದಂತೆ ಅನೇಕರು ಅಭಿಯಾನದಲ್ಲಿ ಭಾಗವಹಿಸಿದ್ದರು.