ಮಾಧ್ಯಮ ಜನರ ಸಮಸ್ಯೆ ಪರಿಹರಿಸುವ ಚಿಕಿತ್ಸಕನಾಗಿ ಕೆಲಸ ಮಾಡಬೇಕು

ರಾಯಚೂರು.ಜು.೨೯- ಮಾಧ್ಯಮಗಳು ಜನರ ಸಮಸ್ಯೆಗಳನ್ನು ಪರಿಹಾರಿಸುವ ಚಿಕಿತ್ಸಕನಾಗಿ ಕೆಲಸ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೆಂಕಟೇಶ ಹೇಳಿದರು.
ಅವರು ಸಿಂಗನೋಡಿ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾಲಯ ರಾಯಚೂರು ಮತ್ತು ಕೃಷಿ ತಾಂತ್ರಿಕ ಮಹಾವಿದ್ಯಾಲಯ ರಾಯಚೂರು ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸಿ, ಮಾಧ್ಯಮಗಳು ಮತ್ತು ಸಾಮಾಜಿಕ ಜವಾಬ್ದಾರಿ ಎಂಬ ವಿಷಯ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.
ಇಂದು ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿದ್ದಾವೆ, ಆ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸವನ್ನು ಮಾಡಬೇಕಿದೆ. ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಸೂಚಿಸುವ ಮಾರ್ಗದರ್ಶಿಯಾಗಿ ಕೆಲಸ ಮಾಡಬೇಕಾಗಿದೆ ಎಂದರು. ಮಾಧ್ಯಮಗಳು ಜನರ ಮನಸ್ಸನ್ನು ಅರಳಿಸುವ ಕೆಲಸ ಮಾಡಬೇಕು ಆದರೆ ಮನಸ್ಸನ್ನು ಕೆರಳಿಸುವ ಕೆಲಸ ಮಾಡಬಾರದು. ಮಾದ್ಯಮಗಳು ರಾಜಕೀಯ ಸುತ್ತ ಗಿರಿಕಿ ಹೊಡೆಯುವುದನ್ನು ಬಿಟ್ಟು, ಸಾಮಾಜಿಕ ಸಮಸ್ಯೆಗಳತ್ತ ಹೊರಳಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದ ಇಂಡಿಯನ್ ರೆಡ್ ಕ್ರಾಸ್ ವಿಭಾಗದ ಕೋ ಅರ್ಡಿನೇಟರ್ ಆದ ಡಾ. ರಾಜಣ್ಣ, ರಿಮ್ಸ್ ಆಸ್ಪತ್ರೆಯ ವೈದ್ಯರಾದ ಡಾ. ಗುರುರಾಜ್, ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾಕ್ಟರ್ ಕೆ.ವಿ ಪ್ರಕಾಶ್, ಎನ್‌ಎಸ್‌ಎಸ್ ನ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಯೇಸಪ್ಪ ಮತ್ತು ಡಾ.ಮುರಳಿ ಎಂ ಹಾಗೂ ಕೃಷಿ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ನ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.