ಮಾಧ್ಯಮ ಪ್ರತಿನಿಧಿಗಳಿಗೆ ರೋಗನಿರೋಧಕ ಶಕ್ತಿ ವೃದ್ಧಿ ಮಾತ್ರೆಗಳ ವಿತರಣೆ

ಬಳ್ಳಾರಿ,ಜೂ.02: ಕೋವಿಡ್ ಫ್ರಂಟ್ ಲೈನ್ ವಾರಿಯರ್ಸ್‌ ಗಳಾಗಿ ಸೇವೆ ಸಲ್ಲಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಆಯುಷ್ ಇಲಾಖೆಯಿಂದ ರೋಗನಿರೋಧಕ ಶಕ್ತಿ ವೃದ್ಧಿಸುವ ಮಾತ್ರೆ ಮತ್ತು ಕಷಾಯದ ಪುಡಿಯನ್ನು ಇಂದು ವಿತರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಅವರ ಸಮ್ಮುಖದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ವರಪ್ರಸಾದರಾವ್ ಅವರು ರೋಗನಿರೋಧಕ ಶಕ್ತಿ ವೃದ್ಧಿಸುವ ಸಂಶಮನಿವಟಿ, ಆಯುಷ್ 64, ಆರ್ಸೆನಿಕ್ ಮಾತ್ರೆಗಳು, ಕಷಾಯ ಪುಡಿಗಳನ್ನುವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರೋಗನಿರೋಧಕ ಶಕ್ತಿ ವೃದ್ಧಿಸುವ ಈ ಮಾತ್ರೆಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ಸೇರಿದಂತೆ ವಿವಿಧ ಇಲಾಖೆಗಳ ಕೊರೊನಾ ವಾರಿಯರ್ಸ್‌ ಗಳಿಗೆ ವಿತರಿಸಲಾಗುತ್ತಿದೆ. ಶೀಘ್ರದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ವಿತರಿಸಲಾಗುವುದು ಎಂದು ತಿಳಿಸಿದರು.
ಆಯುಷ್ ಇಲಾಖೆಯ ಸಹಾಯಕ ಆಡಳಿತ ಅಧಿಕಾರಿ ಶರಣಬಸಪ್ಪ ಜಿನಗಾ, ವೈದ್ಯರಾದ ಡಾ.ಮಾಧುರಿದೇವಿ,ಭಾರತಿ ಮತ್ತು ಇಲಾಖೆಯ ಇತರರು ಹಾಗೂ ಮಾಧ್ಯಮ ಪ್ರತಿನಿಧಿಗಳು ಇದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಾಮಾನ್ಯ ಚಿಕಿತ್ಸೆಗೆ ಸಂಬಂಧಿಸಿದ ಮಾತ್ರೆಗಳನ್ನು ಸಹ ವಿತರಿಸಲಾಯಿತು.