ಮಾನವಿಯತೆ ಮೇರೆದ ಪುರಸಭೆ ಮುಖ್ಯಾಧಿಕಾರಿ ಚಂದ್ರಕಾಂತ ಪಾಟೀಲ

ಚಿಂಚೋಳಿ,ಏ.27- ನಗರದ ಬೀದರ ಕ್ರಾಸ ಹತ್ತಿರ ಅಪರಚಿತ ವ್ಯಕ್ತಿಯೊಬ್ಬ ರಸ್ತೆ ಬದಿ ಬಿದ್ದು, ನರಳಾಡುತ್ತಿದ್ದನ್ನು ಕಂಡ ಪುರಸಭೆ ಮುಖ್ಯಾಧಿಕಾರಿ ಚಂದ್ರಕಾಂತ ಪಾಟೀಲ ಅವರು, ಆಸ್ಪತ್ರೆಗೆ ಕರೆ ಮಾಡಿ ಆಂಬ್ಯುಲೆನ್ಸ ಕರೆಸುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ.
ಅಂಬ್ಯುಲೆನ್ಸ ವಾಹನಲ್ಲಿ ಪುರಸಭೆ ಸಿಬ್ಬಂದಿಗಳಾದ ಸಂಗಮೇಶ, ಆನಂದ ಕಾಂಬಳೆ ಅವರನ್ನು ಕಳುಹಿಸಿಕೊಟ್ಟರು. ಈ ಸಂದರ್ಭದಲ್ಲಿ ಚಿಂಚೋಳಿಯ ಸರ್ಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಣಾ ಸಮಿತಿಯ ಸದಸ್ಯರಾದ ಪವನಕುಮಾರ ಗೋಪನಪಳ್ಳಿ. ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು.