ಮಾನವೀಯ ಮೌಲ್ಯ ಕಲಿಸುವುದು ಉನ್ನತ ಶಿಕ್ಷಣ ಕೇಂದ್ರಗಳಲ್ಲಿ ಪಠ್ಯಕ್ರಮದ ಭಾಗವಾಗಿರಬೇಕು

ಕಲಬುರಗಿ:ಸೆ.5: ಉನ್ನತ ಶಿಕ್ಷಣ ಕೇಂದ್ರಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೋಧನೆಯ ಅವಿಭಾಜ್ಯ ಅಂಗವಾಗಿ ಸೇರಿಸುವ ಮಹತ್ವವನ್ನು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲಕುಮಾರ ಬಿಡವೆ ಹಾಗೂ ವಿವಿಯ ಸಮಕುಲಪತಿ ಪೆÇ್ರ.ವಿ.ಡಿ.ಮೈತ್ರಿ ಒತ್ತಿ ಹೇಳಿದರು.

ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಸ್ವತಂತ್ರ ಭಾರತದ ಮೊದಲ ಉಪರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಡಾ. ಬಿಡವೆ, ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮಾನವೀಯ ಮೌಲ್ಯಗಳು ಬೇರೂರಲು ಪಠ್ಯಕ್ರಮದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸುವುದು ಅನಿವಾರ್ಯವಾಗಿದೆ ಎಂದರು.

ಡಾ. ಬಿಡವೆ ಮಾತನಾಡಿ, ಶರಣಬಸವ ವಿಶ್ವವಿದ್ಯಾಲಯದಲ್ಲಿ ಕೌಶಲ್ಯದ ಜೊತೆಗೆ ಮೌಲ್ಯಾಧಾರಿತ ಶಿಕ್ಷಣವನ್ನು ಸಾಧಿಸುವ ಮೊದಲ ಹೆಜ್ಜೆಯಾಗಿ ವಿದ್ಯಾರ್ಥಿಗಳಿಗೆ ಚಾಯ್ಸ್ ಬೇಸ್ಡ್ ಕ್ರೆಡಿಟ್ ಸಿಸ್ಟಮ್ ಅಡಿಯಲ್ಲಿ ಮಾನವೀಯ ಮೌಲ್ಯಗಳು ಎನ್ನುವುದು ಒಂದು ವಿಷಯವಾಗಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಶಿಕ್ಷಕರಿಗೆ ಅದ್ಭುತವಾದ ಅವಕಾಶಗಳಿವೆ ಹಾಗೂ ಶಿಕ್ಷಕರ ಅನುಭವ ಮತ್ತು ಪಾಂಡಿತ್ಯವನ್ನು ವಿದ್ಯಾರ್ಥಿಗಳ ವೃತ್ತಿಜೀವನವನ್ನು ರೂಪಿಸಲು ಮತ್ತು ಅವರನ್ನು ಜವಾಬ್ದಾರಿಯುತ ಹಾಗೂ ಮೌಲ್ಯಾಧಾರಿತ ವ್ಯಕ್ತಿಗಳಾಗಿಸಲು ಬಳಸಬೇಕು ಎಂದು ಹೇಳಿದರು.

ಶಿಕ್ಷಕರು ತಮ್ಮ ಅನುಭವ ಮತ್ತು ಪರಿಣಿತಿಯನ್ನು ತಮ್ಮ ವಿಷಯಗಳ ಗಡಿಗೆ ಸೀಮಿತಗೊಳಿಸದೆ, ಗಡಿಗಳನ್ನು ಮೀರಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಂಸ್ಕøತಿ ಮತ್ತು ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ಡಾ. ಬಿಡವೆ ಶಿಕ್ಷಕರಿಗೆ ಸಲಹೆ ನೀಡಿದರು. ವಿದ್ಯಾರ್ಥಿಯನ್ನು ಸಂಪೂರ್ಣ ಮತ್ತು ಜವಾಬ್ದಾರಿಯುತ ನಾಗರಿಕನನ್ನಾಗಿ ಮಾಡಲು ಕೇವಲ ವಿಷಯದ ಜ್ಞಾನವು ಸಾಕಾಗುವುದಿಲ್ಲ, ಅವರಿಗೆ ಜೀವನದ ಮೌಲ್ಯಗಳನ್ನು ಕಲಿಸುವುದು ವೃತ್ತಿಪರ ಜಗತ್ತಿನಲ್ಲಿ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳ ಗುಣಮಟ್ಟವನ್ನು ಹೆಚ್ಚಿಸುತ್ತದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ 2020 ಸಹ ಉನ್ನತ ಶಿಕ್ಷಣದಲ್ಲಿ ಪಠ್ಯಕ್ರಮದ ಭಾಗವಾಗಿ ಮಾನವೀಯ ಮೌಲ್ಯಗಳನ್ನು ಪರಿಚಯಿಸಲು ಒಲವು ತೋರಿದೆ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ಗುಣಮಟ್ಟದ ಶಿಕ್ಷಣ ನೀಡುವಲ್ಲಿ 100 ವರ್ಷಗಳಿಗೂ ಹೆಚ್ಚು ಶ್ರೀಮಂತ ಪರಂಪರೆಯನ್ನು ಹೊಂದಿದೆ. ಇದರಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶರಣಬಸವ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಲ್ಲಿ ಶಿಕ್ಷಣ ನೀಡುವುದರ ಜೊತೆಗೆ ಮಾನವೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ತುಂಬುತ್ತಿದೆ ಎಂದು ಹೇಳಿದರು. 18ನೇ ಶತಮಾನದ ಸಂತ ಶ್ರೀ ಶರಣಬಸವೇಶ್ವರರು ಹಾಗೂ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಮಹಾದಾಸೋಹಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಶಿಕ್ಷಣದಲ್ಲಿ ಮಾನವೀಯತೆ ಬಿತ್ತುತ್ತಿದ್ದಾರೆ. ಈ ಮಹಾನ್ ವ್ಯಕ್ತಿಗಳು ತೋರಿದ ದಾರಿಯಲ್ಲಿ ಸಾಗಿ ಅವರ ಆದರ್ಶಗಳನ್ನು ಶಿಕ್ಷಕರೆಲ್ಲರೂ ಮೈಗೂಡಿಸಿಕೊಳ್ಳಬೇಕೆಂದರು.

ಪೆÇ್ರ.ವಿ.ಡಿ.ಮೈತ್ರಿ ಅವರು ತಮ್ಮ ಭಾಷಣದಲ್ಲಿ ಡಾ. ಬಿಡವೆ ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಅನುಮೋದಿಸಿದರು ಮತ್ತು ಉನ್ನತ ಶಿಕ್ಷಣ ಕೇಂದ್ರಗಳು ಮೊದಲ ಆದ್ಯತೆಯಲ್ಲಿ, ತಮ್ಮ ಪಠ್ಯಕ್ರಮದ ಭಾಗವಾಗಿ ಮಾನವ ಮೌಲ್ಯಗಳನ್ನು ಸೇರಿಸುವ ಅವಶ್ಯಕತೆಯಿದೆ ಎಂದು ಹೇಳಿದರು. ವಿಶ್ವದ ಉನ್ನತ ವಿಶ್ವವಿದ್ಯಾಲಯಗಳು ಅದರ ದೂರದೃಷ್ಟಿ ಮತ್ತು ಧ್ಯೇಯದೊಂದಿಗೆ ಆಯಾ ಸಂಸ್ಥೆಯ ಮೌಲ್ಯಗಳನ್ನು ಸೇರಿಸಿದೆ ಎಂದು ಅವರು ಹೇಳಿದರು.

ಶಿಕ್ಷಣ ಕ್ಷೇತ್ರದಲ್ಲಿ ಶ್ರೇಷ್ಠ ದಾರ್ಶನಿಕ ಡಾ. ರಾಧಾಕೃಷ್ಣನ್ ಅವರ ಕೊಡುಗೆಯನ್ನು ಸ್ಮರಿಸಿದ ಅವರು, ಉದಾತ್ತ ವೃತ್ತಿಯನ್ನು ಗೌರವಿಸಲು ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಬೇಕೆಂದು ಅವರು ಬಯಸಿದ್ದರು. 1958ರಲ್ಲಿ ಭಾರತದ ಉಪರಾಷ್ಟ್ರಪತಿಯಾಗಿದ್ದ ಡಾ. ರಾಧಾಕೃಷ್ಣನ್ ಅವರು ಇಂದು ಎಚ್‍ಕೆಇ ಸೊಸೈಟಿ ನಡೆಸುತ್ತಿರುವ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ್ ಕಾಲೇಜು ಉದ್ಘಾಟನೆಗೆ ಕಲಬುರಗಿಗೆ ಆಗಮಿಸಿದ್ದರು, ಅವರ ಸ್ಮರಣಾರ್ಥ ಕಾಲೇಜಿನಲ್ಲಿ ಡಾ. ರಾಧಾಕೃಷ್ಣನ್ ಅವರ ಪ್ರತಿಮೆ ಸ್ಥಾಪಿಸಲಾಗಿದೆ ಎಂದರು.

ಕಂಪ್ಯೂಟರ್ ಅಪ್ಲಿಕೇಷನ್ ವಿಭಾಗದ ಡೀನ್ ಡಾ. ಶ್ರೀಕಾಂತ ಪಾಟೀಲ ಸ್ವಾಗತಿಸಿದರೆ, ಬಿಸಿಎ ವಿಭಾಗದ ಚೇರಪರ್ಸನ್ ಪೆÇ್ರ. ಶ್ರೀಧರ ಅಣಕಲ್ ವಂದಿಸಿದರು.