ಮಾನವ ಕಳ್ಳಸಾಗಣೆ: ಎಚ್ಚೆತ್ತುಕೊಳ್ಳಲು ಕರೆ

(ಸಂಜೆವಾಣಿ ವಾರ್ತೆ)
ಬ್ಯಾಡಗಿ,ಆ2: ದೇಶದಲ್ಲಿ ವಾಸಿಸುವ ಪ್ರಜೆಗಳಿಗೆ ಅನೇಕ ಕಾಯ್ದೆ ಕಾನೂನುಗಳಿವೆ. ಅವುಗಳ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಎಸ್.ಟಿ.ಸತೀಶ ಹೇಳಿದರು.
ಪಟ್ಟಣದ ಆದರ್ಶ ಶಿಕ್ಷಣ ಸಂಸ್ಥೆಯ ವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಪೆÇಲೀಸ್ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ಹಾಗೂ ಆದರ್ಶ ಸೆಂಟ್ರಲ್ ಸ್ಕೂಲ್ ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳ ಮತ್ತು ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಡತನದಲ್ಲಿರುವ ಹೆಣ್ಣು ಮಕ್ಕಳಿಗೆ ಹಣದ ಸಹಾಯ ಅಗತ್ಯವಿರುತ್ತದೆ. ಹೆಂಗಸರು ಆಮಿಷಗಳಿಗೆ ಬಲಿಯಾಗಿ ಮೋಸ ಹೋಗುವುದನ್ನು ತಡೆಯಬೇಕು. ಮಕ್ಕಳನ್ನು ಪೆÇೀಷಕರು ತುಂಬಾ ಜಾಗೃತೆಯಿಂದ ಬೆಳೆಸಬೇಕು. ಮಕ್ಕಳಿಗೆ ಯಾವುದು ಸರಿ, ಯಾವುದು ತಪ್ಪು ಎಂಬ ವಿಚಾರಗಳನ್ನು ತಿಳಿಸಿಕೊಡಬೇಕು ಎಂದರು.
ಎಎಸ್’ಐ ಕೆ.ಎನ್.ನಿಂಗೇಹಳ್ಳಿ ಮಾತನಾಡಿ, ಸಮಾಜದಲ್ಲಿ ಇದೀಗ ಮಾನವ ಕಳ್ಳ ಸಾಗಾಣಿಕೆಯು ಬಹುದೊಡ್ಡ ಸಮಸ್ಯೆಯಾಗಿ ಬೆಳೆದಿದ್ದು, ಅದರಲ್ಲೂ ಮಾನವ ಕಳ್ಳ ಸಾಗಾಣಿಕೆಗೆ ಹೆಚ್ಚಾಗಿ ಬಲಿಯಾಗುತ್ತಿರುವವರು ಹೆಂಗಸರು ಮತ್ತು ಮಕ್ಕಳು. ಇದರಿಂದ ಎಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎನ್.ಬಾರ್ಕಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ರಾಜಣ್ಣ ನ್ಯಾಮತಿ, ಕೆ.ಆರ್.ಲಮಾಣಿ, ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳಾದ ಜಯದೇವ ಶಿರೂರ, ವೀರೇಶ ಶಿರೂರ, ಎಂ.ಜೆ.ಪಾಟೀಲ, ಅಂಗನವಾಡಿ ಮೇಲ್ವಿಚಾರಕಿ ಸುಮಂಗಲ ಬಕ್ಕನವರ, ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಬಿ.ಜಿ.ಹಿರೇಮಠ, ಕಾರ್ಯದರ್ಶಿ ಎಂ.ಪಿ.ಹಂಜಗಿ, ನ್ಯಾಯವಾದಿಗಳಾದ ಕೆ.ಡಿ.ಪಾಟೀಲ, ಭಾರತೀ ಕುಲಕರ್ಣಿ, ಲಕ್ಷ್ಮಿ ಗುಗ್ಗುರಿ, ಆದರ್ಶ ಶಿಕ್ಷಣ ಸಂಸ್ಥೆಯ ಮುಖ್ಯಶಿಕ್ಷಕ ಅವಿನಾಶ್ ಮೋಹಿತೆ ಹಾಗೂ ಸಿಬ್ಬಂದಿ ವರ್ಗ, ನ್ಯಾಯಾಂಗ ಮತ್ತು ಪೆÇಲೀಸ್ ಇಲಾಖೆಯ ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು