ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಜು.31: ಮಾನವ ಕಳ್ಳ ಸಾಗಾಣಿಕೆ ಮಾಡುವುದು ದೇಶಕ್ಕೆ ದಕ್ಕೆ ತುರುವಾದ್ದಾಗಿದ್ದು, ಮಕ್ಕಳು ಮತ್ತು ಮಹಿಳೆಯರು ಕಳ್ಳ ಸಾಗಾಣಿಕೆಯಿಂದ ಭಿಕ್ಷಾಟನೆ, ಬಾಲಕಾರ್ಮಿಕ ಪದ್ದತಿಗೆ, ಲೈಂಗಿಕ ದೌಜ್ರ್ಯನಕ್ಕೆ ಬಲಿಯಾಗುತ್ತಿದ್ದಾರೆ ಎಂದು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಹಾಜಿ ಹುಸೇನ್ ಸಾಬ್ ಯಾದವಾಡ್ ಬೇಸರ ವ್ಯಕ್ತ ಪಡಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಜಾಗೃತ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಯೊಬ್ಬ ಅಧಿಕಾರಿಯು ಇಂತಹ ಕೃತ್ಯ ನಡೆಸುತ್ತಿರುವವರ ಮೇಲೆ ನಿಗಾವಹಿಸಿ, ಅನುಮಾನ ವ್ಯಕ್ತಿಗಳು ಕಂಡು ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡಬೇಕು, ಅಧಿಕಾರಿಗಳ ಜತೆ ಸಾರ್ವಜನಿಕರೂ ಕೈ ಜೋಡಿಸಿದಾಗ ಮಾತ್ರ ಇಂತಹ ಕೃತ್ಯಗಳನ್ನು ತಡೆಯಲು ಸಾಧ್ಯವಾಗಲಿದೆ ಎಂದು ಹೇಳಿದರು.
ತಹಸೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ, ತಾ.ಪಂ. ಇ.ಒ.ಎಂ.ಬಸಪ್ಪ, ಸಿಡಿಪಿಒ ಜಲಾಲಪ್ಪ, ಬಿಸಿಎಂ ಅಧಿಕಾರಿ ಎ.ಗಾದಿಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಜೇಶ್ವರಿ, ಸಿ.ಪಿ.ಐ.ಯಶವಂತ ಬಿಸ್ನಳ್ಳಿ, ಟಿ.ಎಚ್.ಒ. ಡಾ.ಈರಣ್ಣ, ಪ.ಪಂಗಡ ಇಲಾಖೆ ಅಧಿಕಾರಿ ರಾಘವೇಂದ್ರ ವರ್ಮ ಹಾಗೂ ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತರು ಇದ್ದರು.

Attachments area