ಮಾನವ ಹಕ್ಕುಗಳ ಆಯೋಗದ ಸದಸ್ಯರ ಭೇಟಿ

ಧಾರವಾಡ, ಡಿ.13: ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್.ಕೆ. ವಂಟಗೋಡಿ ಅವರು ಧಾರವಾಡದ ವಿವಿಧ ಇಲಾಖೆಗಳಿಗೆ ಭೇಟಿ ನೀಡಿದರು.

ಬೇಂದ್ರೆ ನಗರದ (ಸಂಪಿಗೆ ನಗರ) ಎಸ್‍ಸಿ, ಎಸ್‍ಟಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಅಲ್ಪ ಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಬೇಟಿ ನೀಡಿ ಮೂಲಸೌಕರ್ಯಗಳ ಕುರಿತು ವಿದ್ಯಾರ್ಥಿನಿಯರುಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲಿನ ಸ್ಥಿತಿಗತಿ ಪರಿಶೀಲಿಸಿ ನಂತರ ಜಿಲ್ಲಾ ಆಸ್ಪತ್ರೆ ಹಾಗೂ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಕುರಿತು ಪರಿಶೀಲನೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಅಲ್ಲಾಬಕಾಷ್ ಎಮ್.ಎಸ್., ತಹಶಿಲ್ದಾರ ದೊಡ್ಡಪ್ಪ ಹೂಗಾರ ಹಾಗೂ ಶಸ್ತ್ರ ಚಿಕಿತ್ಸಕ ಸಂಗಪ್ಪ ಗಾಬಿ ಅವರು ಉಪಸ್ಥಿತರಿದ್ದರು.