ಮಾನಸಿಕ, ದೈಹಿಕವಾಗಿ ಸದೃಢರಾಗಲು ಕ್ರೀಡಾಕೂಟಗಳು ಸಹಕಾರಿ

ಹನೂರು, ನ.17: ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಲು ಕ್ರೀಡಾಕೂಟಗಳು ಸಹಕಾರಿಯಾಗಿದೆ ಎಂದು ಜನಾಶ್ರಯ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಜನಧ್ವನಿ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು.
ಹನೂರು ತಾಲ್ಲೂಕಿನ ದಿನ್ನಳ್ಳಿ ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳ ಯುವಕರಗಳ ತಂಡ ದೀಪಾವಳಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಕ್ರಿಕೆಟ್ ಕ್ರೀಡಾಕೂಟದಲ್ಲಿ ವಿಜೇತರಾದ ಬಹುಮಾನವನ್ನು ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗದೇ ಇರುವ ದಿಸೆಯಲ್ಲಿ ಇಂತಹ ಕ್ರೀಡೆಗಳು ಸಹಕಾರಿಯಾಗಿದೆ. ಮದ್ಯ, ಗಾಂಜಾ, ಇನ್ನಿತರೆ ಸೇವೆನಗಳನ್ನು ಮಾಡಿ ಕಾಲಹರಣ ಮಾಡುವ ಬದಲು ಮೈ ಮನಸ್ಸಿಗೆ ಅನುಕೂಲವಾಗುವ ಆಟೋಟಗಳನ್ನು ಆಡುವ ಮೂಲಕ ಸಮಯಗಳನ್ನು ಕಳೆಯಿರಿ. ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜ. ಕ್ರೀಡಾಕೂಟಗಳಲ್ಲಿ ಕ್ರೀಡಾಸ್ಪೂರ್ತಿಯನ್ನು ಮೆರೆಯಬೇಕೆಂದು ಸಲಹೆಯ ನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ಜನಾಶ್ರಯ ಟ್ರಸ್ಟ್‍ನ ಕಾರ್ಯದರ್ಶಿ ಲೋಕೇಶ್ ಜತ್ತಿ, ಚಿರಂಜಿವಿ ಇನ್ನಿತರರು ಇದ್ದರು.