ಮಾನ್ವಿ,ಸಿರವಾರ, ಮಿನಿ ವಿಧಾನಸೌಧಕ್ಕೆ ಅನುದಾನ ಬಿಡುಗಡೆಗೆ ಆರ್.ಅಶೋಕಗೆ ಮನವಿ

ಮಾನ್ವಿ.ಸೆ.೨೪-ಮಾನ್ವಿ ಮತ್ತು ಸಿರವಾರ ತಾಲೂಕಿಗೆ ಮಿನಿ ವಿಧಾನಸೌಧ ಕಟ್ಟಡಕ್ಕಾಗಿ ಅನುದಾನ ಬಿಡುಗಡೆಗೊಳಿಸಲು ಕಂದಾಯ ಸಚಿವರಾದ ಆರ್ ಅಶೋಕ್ ಅವರಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಮನವಿ ಮಾಡಿಕೊಂಡರು.
ಇಂದು ಬೆಂಗಳೂರಿನ ವಿಧಾನಸೌಧ ಮುಂಗಾರು ಅಧಿವೇಶನದಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ಅವರನ್ನು ಭೇಟಿ ಮಾಡಿ ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಬಹುದಿನಗಳ ಬೇಡಿಕೆಯಾದ ಮಾನ್ವಿ ಮತ್ತು ನೂತನ ಸಿರವಾರ ತಾಲೂಕಿನಲ್ಲಿ ಮಿನಿ ವಿಧಾನಸೌಧಕ್ಕೆ ಅನುದಾನ ನೀಡಬೇಕೆಂದು ಮನವಿ ಮಾಡಿಕೊಂಡರು.