ಮಾನ್ವಿ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ, ಕಾರ್ಯದರ್ಶಿ ಆಯ್ಕೆ

ಮಾನ್ವಿ,ಮಾ.೧೭- ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನಾಗರಾಜ ತಡಕಲ್ ಹಾಗೂ ಕಾರ್ಯದರ್ಶಿಯಾಗಿ ಲಕ್ಷ್ಮಣ್ ರಾವ್ ಕಪಗಲ್ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಪತ್ರಿಕಾಭವನದಲ್ಲಿ ಗುರುವಾರ ಕಾರ್ಯನಿರತರ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ, ಜಿಲ್ಲಾ ಕಾರ್ಯದರ್ಶಿ ಹಟ್ಟಿ ಪಾಷ ಇವರ ಸಹಯೋಗದೊಂದಿಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಯಾರು ಕೂಡ ನಾಮಪತ್ರ ಸಲ್ಲಿಸದ ಕಾರಣದಿಂದಾಗಿ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇವರು ಸಂಘದ ನಿಯಮದಡಿಯಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪಿ. ಪರಮೇಶ, ಶರಣಬಸವ ನೀರಮಾನವಿ, ಬಸವರಾಜ ಬೋಗವತಿ, ತಾಯಪ್ಪ ಬಿ ಹೊಸೂರು, ಮಾಜಿ ಅಧ್ಯಕ್ಷ ಎಂ.ಬಿ ಸಿದ್ದರಾಮಯ್ಯ ಸ್ವಾಮಿ, ಮಾಜಿ ಕಾರ್ಯದರ್ಶಿ ಮಾರೆಪ್ಪ ಸೇರಿದಂತೆ ಅನೇಕ ಪತ್ರಕರ್ತರು ಉಪಸ್ಥಿತರಿದ್ದರು.