ಮಾಯಕೊಂಡದಲ್ಲಿ ಪ್ರಭಾ ಮಲ್ಲಿಕಾರ್ಜುನ್ ಪ್ರಚಾರ

ಸಂಜೆವಾಣಿ ವಾರ್ತೆ

ದಾವಣಗೆರೆ.ಏ.12; ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಪ್ರಭಾ ಮಲ್ಲಿಕಾರ್ಜುನ್  ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಿತ್ತೂರು, ಕುರುಡಿ, ಹೆಮ್ಮನ ಬೇತೂರು, ಚಿಕ್ಕವ್ವನಾಗ್ತಿಹಳ್ಳಿ, ದ್ಯಾಮವ್ವನಹಳ್ಳಿ, ಗಾಂಧಿ ನಗರ, ಹುಲಿಕಟ್ಟೆ, ಕೆರೆಯಾಗಳಹಳ್ಳಿ, ಗಿರಿಯಾಪುರ, ಗೊಲ್ಲರಹಳ್ಳಿ ಅಣಜಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು.ಈ ಸಂದರ್ಭದಲ್ಲಿ ಶಾಸಕರಾದ ಬಸವಂತಪ್ಪ, ಬ್ಲಾಕ್ ಅಧ್ಯಕ್ಷರಾದ ಹನುಮಂತಪ್ಪ, ಬಿ.ಜಿ ನಾಗರಾಜ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಎಸ್.ಕೆ ಚಂದ್ರಣ್ಣ, ಮುದೇಗೌಡ್ರ ಗಿರೀಶ್, ಬೇತೂರು ಕರಿಬಸಪ್ಪ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.