ಮಾಯಕೊಂಡ; ಬಿಜೆಪಿ ಅಭ್ಯರ್ಥಿ ಎಂ.ಬಸವರಾಜ್ ನಾಯ್ಕ್ ನಾಮಪತ್ರ ಸಲ್ಲಿಕೆ

ದಾವಣಗೆರೆ.ಏ.೧೯: ಮಾಯಕೊಂಡ ಮೀಸಲು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಬಸವರಾಜನಾಯ್ಕ ಮಂಗಳವಾರ ಅದ್ಧೂರಿ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದರು.ಜಯದೇವ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಭಾರೀ ಮೆರವಣಿಗೆ ನಡೆಸಲಾಯಿತು. ಸಂಸದ ಡಾ. ಜಿ.ಎಂ. ಸಿದ್ದೇಶ್ವರ, ಶಾಸಕ ಪ್ರೊ. ಎನ್. ಲಿಂಗಣ್ಣ, ಎಸ್.ಎ. ರವೀಂದ್ರನಾಥ್, ವಿಧಾನ ಪರಿಷತ್ತು ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿಸ್ವಾಮಿ, ಮಂಡಲ ಬಿಜೆಪಿ ಅಧ್ಯಕ್ಷ ದೇವೇಂದ್ರಪ್ಪ ಇತರರು ಸಾಥ್ ನೀಡಿದರು. ತಹಶೀಲ್ದಾರ್ ಡಾ.ಎಂ.ಬಿ. ಅಶ್ವತ್ ಅವರಿಗೆ ನಾಮಪತ್ರ ಸಲ್ಲಿಸಿದರು.ಭಾರೀ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಂಸದ ಡಾ. ಜಿ.ಎಂ. ಸಿದ್ದೇಶ್ವರ, ಮಾಯಕೊಂಡ ಬಿಜೆಪಿಯ ಹೆಬ್ಬಾಗಿಲು ಎಂದರೆ ತಪ್ಪಾಗಲಾರದು. ಶಾಸಕ ಪ್ರೊ. ಎನ್. ಲಿಂಗಣ್ಣ ಅವರು ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು ಒಳ್ಳೆಯ ಕೆಲಸ ಮಾಡಿಸಿದ್ದಾರೆ. ಮಾಜಿ ಶಾಸಕರೂ ಆಗಿರುವ ಎಂ. ಬಸವರಾಜನಾಯ್ಕ ಸಹ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಗೆಲುವಿನ ಮೊದಲ ಫಲಿತಾಂಶವೇ ಮಾಯಕೊಂಡದಿಂದ ಪ್ರಾರಂಭವಾಗಬೇಕು. ಮಾಯಕೊಂಡ ಕ್ಷೇತ್ರದಲ್ಲಿ ಬಿಜೆಪಿಯನ್ನ ಗೆಲ್ಲಿಸ ಬೇಕು ಎಂದು ಮನವಿ ಮಾಡಿದರು.ವಿಶ್ವ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ರೈತರಿಗೆ ಅನುಕೂಲ ಆಗುವ ಕೃಷಿ ಸಿಂಚಾಯ್ ಯೋಜನೆ, ಮಣ್ಣಿನ ಆರೋಗ್ಯ ಕಾರ್ಡ್ ನೀಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ೧೧೦ ಕೋಟಿ ಜನರಿಗೆ ಉಚಿತ ವಾಗಿ ಎರಡು ಡೋಸ್ ಲಸಿಕೆ ಒದಗಿಸುವ ಮೂಲಕ ಪ್ರಾಣವನ್ನ ಕಾಪಾಡಿದ್ದಾರೆ ಎಂದು ತಿಳಿಸಿದರು.ಕರ್ನಾಟಕದಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೈತರ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾನಿಽ ವಿದ್ಯಾರ್ಥಿ ವೇತನ, ರೈತರ ಖಾತೆಗೆ ನಾಲ್ಕು ಸಾವಿರ ರೂಪಾಯಿ ಜಮಾವಣೆ ಒಳಗೊಂಡಂತೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಜಿಲ್ಲೆಯ ಜನರು ಎಲ್ಲ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಮೇ. ೧೦ ರಂದು ಎಲ್ಲ ರೂ ಬೆಳಗ್ಗೆ ೭ ರಿಂದ ಸಂಜೆ ೫ರ ವರೆಗೆ ತಪ್ಪದೇ ಮತದಾನ ಮಾಡಬೇಕು. ಬಸವರಾಜನಾಯ್ಕ ಅವರನ್ನ ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಅಭ್ಯರ್ಥಿ ಎಂ. ಬಸವರಾಜನಾಯ್ಕ ಮಾತನಾಡಿ, ಮಾಯಕೊಂಡ ಒಳಗೊಂಡಂತೆ ರಾಜ್ಯದಲ್ಲಿ ಬಿಜೆಪಿಯ ಗೆಲುವಿನ ಪತಾಕೆಯನ್ನ ಹಾರಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಆ ಮೂಲಕ ದುರಾಡಳಿತ ದ ಪ್ರತೀಕವಾಗಿರುವ ಕಾಂಗ್ರೆಸ್‌ನ್ನು ಸೋಲಿಸುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನ ಅಽಕಾರಕ್ಕೆ ತರ ಬೇಕು ಎಂದರು.