ಮಾಯಾವತಿ ರವರ 67ನೇ ಹುಟ್ಟು ಹಬ್ಬ “ಜನಕಲ್ಯಾಣ ದಿನ”

ಬೀದರ:ಜ.16: 15 ಜನೆವರಿ ರಂದು ನಗರದ ಸಪ್ನಾ ಹೋಟೇಲ್ ಸಭಾಂಗಣದಲ್ಲಿ ಬಹುಜನ ಸಮಾಜ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ, ಉಕ್ಕಿನ ಮಹಿಳೆ ಉತ್ತರ ಪ್ರದೇಶದ ಮಾಜಿ ಮುಖ್ಯ ಮಂತ್ರಿಗಳು ಅಕ್ಕ ಮಾಯಾವತಿ ರವರ 67ನೇ ಹುಟ್ಟುಹಬ್ಬವನ್ನು “ಜನಕಲ್ಯಾಣ ದಿನ”ವನ್ನಾಗಿ ಬೀದರ ಜಿಲ್ಲಾ ಸಮಿತಿಯ ವತಿಯಿಂದ ಆಚರಿಸಲಾಯಿತು. ಹಾಗೂ ನೂತನವಾಗಿ ಆಯ್ಕೆಯಾಗಿರುವ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ . ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ದತ್ತು ಸೂರ್ಯವಂಶಿ ಮುಖ್ಯ ಅಥಿತಿಗಳಾಗಿ ಉಪಸ್ಥಿತರಿದ್ದರು.

ನಂತರ ಕಾರ್ಯಕರ್ತರನ್ನು ಮತ್ತು ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ಮಾಯಾವತಿ ಅವರು ಮಾದರಿ ಸರ್ಕಾರವನ್ನು ಮುನ್ನಡಿಸಿದರು. ಅದೇ ರೀತಿಯ ಬದಲಾವಣೆ ಕರ್ನಾಟಕದಲೂ ಆಗಬೇಕಿದೆ. ಕಾಂಗ್ರೆಸ್, ಜೆಡಿಎಸ್, ಅಥವಾ ಬಿಜೆಪಿಗೆ ಮತ ಹಾಕಿ ಹತಾಶರಾಗುವ ಬದಲು ಬಹುಜನ ಸಮಾಜ ಪಕ್ಷಕ್ಕೆ ಮತ ನೀಡಲು ಜನರಿಗೆ ಮನವೊಲಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು.

ಜಿಲ್ಲಾಧ್ಯಕ್ಷರು ಕಪಿಲ್ ಗೊಡಬೋಲೇ ಅವರು ಪ್ರಸ್ತಾವಿಕ ಮಾತನಾಡಿದ ಅವರು ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ,ಶೋಷಿತರ ಆರ್ಥಿಕ ಸಮಾಜಿಕ ನ್ಯಾಯಕಾಗಿ ಮತ್ತು ಹಕ್ಕುಗಳಿಗಾಗಿ ಸದಾ ಸಿದ್ದವಿದೆ ಎಂದು ತಿಳಿಸಿದರು.ಈ ಹಿಂದೆ 1994ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬೀದರ್ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದರು. ಹಾಗೂ 2023ರ ಬರುವ ವಿಧಾನಸಭೆಯ ಸರ್ವತ್ರಿಕ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ಬೀದರ್ ಜಿಲ್ಲೆಯಲ್ಲಿ ಸುಮಾರು 2 ರಿಂದ 3 ಸ್ಥಾನಗಳಲ್ಲಿ ಗೆಲುವ ಸಾಧಿಸುವ ಕಲಸ ಮಾಡಬೇಕಾಗಿದೆ. ಮತ್ತು ಬಹುಜನ ಸಮಾಜ ಪಕ್ಷದ ಎಲ್ಲಾ ಕಾರ್ಯಕರ್ತರು ಮುಂದಿನ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಬಿಎಸಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಶ್ರಮ ವಹಿಸಿ ಪಕ್ಷ ಸಂಘಟಿಸಬೇಕು ಎಂದು ಕರೆ ನೀಡಿದರು. ಪ್ರತಿಯೊಬ್ಬ ಕಾರ್ಯಕರ್ತರು ಗುರಿ ಮತ್ತು ಉದ್ದೇಶವನ್ನು ಇಟ್ಟುಕೊಂಡು ಪಕ್ಷದಲ್ಲಿ ನಗರಸಭೆ ಸದಸ್ಯ ನಿಂದ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವ ಮೂಲಕ ಗೆಲ್ಲುವುದಕ್ಕೆಂದೇ ಪ್ರತಿಯೊಬ್ಬ ಕಾರ್ಯಕರ್ತರು ಮಹಾಕಾಂಕ್ಷೆಯನ್ನು ಇಟ್ಟುಕೊಂಡು ಮುಂಬರುವ ನಗರ ಸಭೆ ಮತ್ತು 2023ರ ವಿಧಾನ ಸಭಾ ಚುನಾವಣೆಯಲ್ಲಿ ಪರಿಣಾಮಕಾರಿಯಾದ ಫಲಿತಾಂಶವನ್ನು ನೀಡಬೇಕಾಗಿದೆ. ಅದರ ಪೂರಕವಾಗಿ ಪ್ರತಿಯೊಬ್ಬ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ನಿರ್ದಿಷ್ಟ ಗುರಿಯೊಂದಿಗೆ ಕೆಲಸ ಮಾಡಬೇಕಿದೆ ಎಂದರು .

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೇ, ರಾಜ್ಯ ಕಾರ್ಯದರ್ಶಿ ಅಂಕುಶ್ ಗೋಖಲೆ, ರಾಜ್ಯ ಕಾರ್ಯದರ್ಶಿ ಜಮೀಲ್ ಅಹ್ಮದ ಖಾನ್, ಜಿಲ್ಲಾ ಸಂಯೋಜಕರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ದತ್ತಪ್ಪ ಭಂಡಾರಿ, ಜಿಲ್ಲಾ ಪದಾಧಿಕಾರಿಗಳು, ಎಲ್ಲಾ ತಾಲೂಕ ಪದಾಧಿಕಾರಿಗಳು, ಕಾರ್ಯಕರ್ತರು,ಮುಖಂಡರು ಉಪಸ್ಥಿತರಿದ್ದರು.