ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಕೊಲೆ

ಕಲಬುರಗಿ,ಜೂ.6-ಮಾರಕಾಸ್ತ್ರದಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಆಜಾದಪುರ್ ರಸ್ತೆಯಲ್ಲಿ ನಡೆದಿದೆ.
ಉಮೇರ್ (23) ಕೊಲೆಯಾದ ಯುವಕ. ಉಮೇರ್, ನಗರದ ಬಿಲಾಲಾಬಾದ್ ಕಾಲೋನಿ ನಿವಾಸಿಯಾಗಿದ್ದು, ನಿನ್ನೆ (ಜೂ.5) ರಾತ್ರಿ ಹನ್ನೊಂದು ಮೂವತ್ತರ ಸುಮಾರಿಗೆ ದುಷ್ಕರ್ಮಿಗಳು ಚಾಕುವಿನಿಂದ ದೇಹದ ವಿವಿಧೆಡೆ ಇರಿದು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಉಮೇರ್‍ನನ್ನು ಸ್ಥಳೀಯರು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ವಿಶ್ವವಿದ್ಯಾಲಯ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.