ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಲಸಿಕೆ ಹಾಕಿಸಲು ಮನವಿ

ವಿಜಯಪುರ: ಆ.8:ಜಿಲ್ಲೆಯ 0-2 ವರ್ಷದೊಳಗಿನ ಮಕ್ಕಳಿಗೆ ಹಾಗೂ ಗರ್ಭೀಣಿಯರಿಗೆ ಲಸಿಕೆ ನೀಡುವ ಮಿಷನ್ ಇಂಧ್ರಧನುಷ್ ಕಾರ್ಯಕ್ರಮ ಪರಿಣಾಮಕಾರಿಯಾಗಿ ಹಮ್ಮಿಕೊಂಡಿದ್ದು, ಮಾರಕ ರೋಗಗಳಿಂದ ರಕ್ಷಿಸಲು ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಶಾಂತಿನಗರದಲ್ಲಿ ಹಮ್ಮಿಕೊಂಡ ಪರಿಣಾಮಕಾರಿ ಮಿಷನ್ ಇಂದ್ರಧನುಷ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಗುವಿಗೆ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು.

ಲಸಿಕೆಯಿಂದ ವಂಚಿತರಾದ 0-2 ಒಳಗಿನ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಈ ವಿಶೇಷ ಅಭಿಯಾನದಲ್ಲಿ ಕಡ್ಡಾಯವಾಗಿ ಲಸಿಕೆ ನೀಡಬೇಕು. 12 ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಎಲ್ಲಾ ತಾಯಿಂದಿರು ಮತ್ತು ಪಾಲಕರು ಲಸಿಕೆ ಹಾಕಿಸಬೇಕು ಎಂದು ಹೇಳಿದರು.

ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಅಭಿಯಾನ ಕಾರ್ಯಕ್ರಮವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯುತ್ತದೆ. ಹುಟ್ಟಿದ ಶಿಶುವಿನಿಂದ 2 ವರ್ಷದೊಳಗಿನ ಮಕ್ಕಳಿಗೆ ದೇಹದಲ್ಲಿ ಉಂಟಾಗುವ ವಿವಿಧ ಕಾಯಿಲೆಗಳಿಂದ ರಕ್ಷಣೆ ಒದಗಿಸಲು ಲಸಿಕೆ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಒಟ್ಟು 11 ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯ, ಆದರೆ ನಿಗದಿತ ಅಂತರದಲ್ಲಿ ನೀಡುವ 11 ಲಸಿಕೆಗಳ ಪೈಕಿ ಹಲವು ಮಕ್ಕಳು ಒಂದಿಷ್ಟು ಲಸಿಕೆ ಪಡೆದುಕೊಂಡಿರುವುದಿಲ್ಲ. ಅಂತಹ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲು ಜಿಲ್ಲಾ ಮತ್ತು ತಾಲೂಕುಗಳಲ್ಲಿ ುಷನ್ ಇಂದ್ರಧನುಷ್ ಅಭಿಯಾನ ಹಮ್ಮಿಕೊಂಡಿದ್ದು, ಒಟ್ಟು 3 ಸುತ್ತಿನಲ್ಲಿ ಲಸಿಕೆ ಕಾರ್ಯಕ್ರಮ ನಡೆಯಲಿದ್ದು, ಮೊದಲನೇ ಸುತ್ತು ಆ.7 ರಿಂದ 12ರ ವರೆಗೆ ಎರಡನೇ ಸುತ್ತು ಸೆ.11 ರಿಂದ 16 ಹಾಗೂ ಮೂರನೇ ಸುತ್ತು ಅ. 9 ರಿಂದ 14 ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ನಮ್ಮ ಜಿಲ್ಲೆಯಲ್ಲಿ 0-2 ವರ್ಷದ ಒಟ್ಟು 6676 ಮಕ್ಕಳನ್ನು ಹಾಗೂ 1600 ಗರ್ಭಿಣಿಯರನ್ನು ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಬೇರೆ ಬೇರೆ ಕಾರಣಗಳಿಂದ ಮಕ್ಕಳು ಹಾಗೂ ಗರ್ಭಿಣಿಯರು ಲಸಿಕೆ ಪಡೆಯದೆ ಬಿಟ್ಟು ಹೋಗಿರುತ್ತಾರೆ. ತಿಳುವಳಿಕೆ ಇಲ್ಲದರಿಂದ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಕ್ಕಳು ಲಸಿಕೆಯಿಂದ ವಂಚಿತರಾಗಿರುತ್ತಾರೆ. ಇಂತಹ ಮಕ್ಕಳನ್ನು ಗುರುತಿಸಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ನಗರ, ಗ್ರಾಮೀಣ ಸೇರಿದಂತೆ ಜಿಲ್ಲೆಯ ಎಲ್ಲ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ: ರಾಜಕುಮಾರ ಯರಗಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್.ಎಮ್.ಓ (ಡಬ್ಲ್ಯ.ಹೆಚ್.ಓ) ಅಧಿಕಾರಿಗಳಾದ ಡಾ|| ಮುಕುಂದ ಗಲಗಲಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ|| ಕೆ ಡಿ ಗುಂಡಬಾವಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಳಾದ ಡಾ|| ರಾಜೇಶ್ವರಿ ಗೊಲಗೇರಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ: ಸಂಪತ ಗುಣಾರಿ, ಜಿಲ್ಲಾ ಮಲೇರಿಯಾ ಅಧಿಕಾರಿಗಳಾದ ಡಾ|| ಜೈಬುನಿಸಾ ಬೀಳಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಡಾ|| ಕವಿತಾ ದೊಡಮನಿ, ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ|| ಪಿ ಎ ಹಿಟ್ಟನ್ನಳಿ, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಡಾ|| ಕೆ ಕೆ ಚವ್ಹಾಣ, ಸಿ.ಡಿ.ಪಿ.ಓ ಅಧಿಕಾರಿಳಾದ ಶ್ರೀಮತಿ ದೀಪಾಕ್ಷಿ ಜಾನಕಿ, ಎಸ್ ಸಿ ಮ್ಯಾಗೇರಿ, ಆಡಳಿತ ವೈದ್ಯಾಧಿಕಾರಿಗಳಾದ ಡಾ|| ಬಾಲಕೃಷ್ಣ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಶಾಂತಿನಗರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ.ಎಮ್ ಕೊಲೂರ ಹಾಗೂ ಬಿ ಪಿ ಜಕ್ಕನಗೌಡರ, ಮಾಹದೇವ ನಿಲಂಗಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎನ್ ಆರ್ ಬಾಗವಾನ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.