ಮಾರುತಿ ಬಾವಿದೊಡ್ಡಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಬೀದರ್: ಮಾ.14:ಜಿಲ್ಲೆಯ ಹಿರಿಯ ಪತ್ರಕರ್ತರಲ್ಲಿ ಒಬ್ಬರಾದ ಮಾರುತಿ ಬಾವಿದೊಡ್ಡಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ದೊರೆತಿದೆ.

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿಯು ರೂ. 25 ಸಾವಿರದ ಚೆಕ್, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ.

ಮಾರುತಿ ಬಾವಿದೊಡ್ಡಿ ಮೂರೂವರೆ ದಶಕದಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅನೇಕ ಸ್ಥಳೀಯ, ರಾಜ್ಯ ಮಟ್ಟದ ಪತ್ರಿಕೆಗಳ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ.

ತಮ್ಮ ಹರಿತವಾದ ಲೇಖನಿ ಮೂಲಕ ಅನೇಕ ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ನೋಂದವರು, ಶೋಷಿತರು, ಅಸಹಾಯಕರಿಗೆ ನ್ಯಾಯ ದೊರಕಿಸಿಕೊಡಲು ಪ್ರಯತ್ನಿಸಿದ್ದಾರೆ.

ಸದ್ಯ ಅವರು ಇಂಡಿಯನ್ ಎಕ್ಸ್‍ಪ್ರೆಸ್ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬಾವಿದೊಡ್ಡಿ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಜಿಲ್ಲೆಯ ಅನೇಕ ಪತ್ರಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.