ಮಾರ್ಗಸೂಚಿ ಪಾಲಿಸಿ: ಇಲ್ಲವೇ ಲಾಕ್ ಡೌನ್ ಮಾದರಿಯ ನಿಯಂತ್ರಣ: ಎಚ್ಚರಿಕೆ

ಮುಂಬೈ,ಮಾ.28- ಜನರು ಕಟ್ಟುನಿಟ್ಟಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ತಪ್ಪಿದ್ದಲ್ಲಿ ಲಾಕ್ ಡೌನ್ ಮಾದರಿಯ ನಿಯಂತ್ರಣ ಹೇರಲಾಗುವುದು ಎಂದು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ.

ಕೋವಿಡ್ ಮಾರ್ಗಸೂಚಿಗಳನ್ನು ಜನರು ತಪ್ಪದೆ ಪಾಲಿಸುವ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡುವುದಕ್ಕೆ ಕಡಿವಾಣ ಹಾಕಲು ಸಹಕಾರ ನೀಡಬೇಕು ಇಲ್ಲದಿದ್ದರೆ ಲಾಕ್ ಡೌನ್ ಮಾದರಿಯಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಜನರು ಕೋವಿಡ್ ಮಾರ್ಗಸೂಚಿಗಳನ್ನು ಜನರು ಕಟ್ಟು ನಿಟ್ಟಾಗಿ ಪಾಲಿಸದೆ ಇರುವುದು ಸೋಂಕು ಪ್ರಮಾಣವನ್ನು ಗಣನೀಯವಾಗಿ ಏರಿಕೆಯಾಗಲು ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ

ಕಳೆದ ಕೆಲವು ವಾರಗಳಿಂದ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಪ್ರಮಾಣ ಗಣನೀಯ ವಾಗಿ ಹೆಚ್ಚಳವಾಗುತ್ತಿರುವುದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ನಿದ್ದೆ ಗೆಡಿಸಿದೆ.

ಜೊತೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಗೂ ಆತಂಕ ಹೆಚ್ಚು ಮಾಡಿದ್ದು ಕೋವಿಡ್ ಸೋಂಕು ನಿಯಂತ್ರಣ ಕಷ್ಟ ಸಾದ್ಯವಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾದರಿಯ ನಿಯಮ ಜಾರಿ ಮಾಡಲು ನಿರ್ಧರಿಸಲಾಗಿದೆ.

ದೇಶದಲ್ಲಿ ನಿತ್ಯ ದಾಖಲಾಗುತ್ತಿರುವ ಪ್ರಕರಣಗಳ ಪೈಕಿ ಮಹಾರಾಷ್ಟ್ರ ಒಂದರಲ್ಲಿ ಶೇಕಡ 60 ರಿಂದ 70 ರಷ್ಟು ಪ್ರಮಾಣದಲ್ಲಿ ಸೋಂಕು ದಾಖಲಾಗುತ್ತಿದೆ.