ಮಾರ್ಗಸೂಚಿ ಪಾಲಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ

ಧಾರವಾಡ,ಜೂ9: ಹುಬ್ಬಳಿ-ಧಾರವಾಡ ಮಹಾನಗರ ಪಾಲಿಕೆಯ ಕೆಲವು ವಾರ್ಡ್‍ಗಳ ವ್ಯಾಪ್ತಿಯ ನಗರಗಳಲ್ಲಿ ಪರಿಶೀಲಿಸಲಾಗಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿ ಇರುವುದು ಕಂಡು ಬಂದಿದೆ. ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಪೆÇೀಲಿಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿಗಳು ಸತತವಾಗಿ ಶ್ರಮಿಸುತ್ತಿದ್ದಾರೆ.
ಅವಳಿನಗರದ ಪ್ರತಿ ವಾರ್ಡ್‍ನಲ್ಲಿ ಪ್ರತಿಯೊಬ್ಬರು ತಪ್ಪದೇ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ ಮತ್ತು ಪರಸ್ಪರ ಸಾಮಾಜಿಕ ಅಂತರವನ್ನು ಕಾಪಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ. ಆದರೂ ಮಹಾನಗರದ ಕೆಲವು ವಾರ್ಡ್‍ಗಳ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಟ್ಟು ಅವಳಿನಗರದ ಸುಮಾರು 9 ವಲಯ ವ್ಯಾಪ್ತಿಯ 20 ವಾರ್ಡ್‍ಗಳ 42 ಪ್ರದೇಶಗಳಲ್ಲಿ 1365 ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಇದೇ ರೀತಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾದರೆ ನಿಯಂತ್ರಿಸಲು ಕಷ್ಟಸಾಧ್ಯವಾಗುತ್ತದೆ. ಸಾರ್ವಜನಿಕರು ಕೋವಿಡ ಮಾರ್ಗಸೂಚಿಗಳನ್ನು ಪಾಲಿಸಿ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡಬೇಕೆಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.