
ದಾವಣಗೆರೆ ಮಾ. 4;: ಮಾರ್ಚ್ 09 ರಿಂದ 29 ರವರೆಗೆ ನಡೆಯುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಡಳಿತ ಕಚೇರಿಯಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು ಪದವಿ ಪೂರ್ವ ಶಿಕ್ಷಣ ಮಂಡಳಿಯ ಮಾರ್ಗಸೂಚಿಯಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕು. ಪರೀಕ್ಷೆ ನಿಯೋಜಿತ ಅಧಿಕಾರಿಗಳು ಸಮಯ ಪಾಲನೆ ಹಾಗೂ ಶಿಸ್ತಿನಿಂದ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.ಕಾಲಕಾಲಕ್ಕೆ ಪರೀಕ್ಷಾ ದಿನಗಳಲ್ಲಿ ಸಂಬಂಧಿಸಿದ ಖಜಾನೆಗಳಿಂದ ಪ್ರಶ್ನೆ ಪತ್ರಿಕೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ವಿತರಣೆ ಕುರಿತು ಹೆಚ್ಚಿನ ಜವಾಬ್ದಾರಿ ವಹಿಸಕೊಳ್ಳಬೇಕು. ಖಜಾನೆ ಅಧಿಕಾರಿಗಳು, ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು. ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಕೊಠಡಿ ಮೇಲ್ವೆಚಾರ ಸಿಬ್ಬಂದಿಗಳು ಮೊಬೈಲ್ ಫೋನ್/ಇತರೆ ವಿದ್ಯುನ್ಮಾನ ಆಧುನಿಕ ಉಪಕರಣಗಳ ಬಳಕೆ ನಿಷೇಧಿಸಿದೆ. ಕೊಠಡಿ ಒಳಗೆ ಯಾರು ವಿದ್ಯುನ್ಮಾನ ಉಪಕರಣಗಳನ್ನು ತರಗೆದುಕೊಂಡು ಹೋಗುವಂತಿಲ್ಲ ಹಾಗೂ ಪರೀಕ್ಷಾ ಕೇಂದ್ರ ಆವರಣದಲ್ಲಿ ಅನಾವಶ್ಯಕ ಓಡಾಟ ಪರೀಕ್ಷೆ ಕಾರ್ಯಕ್ಕೆ ಸಂಬಂಧಿಸಿದೆ ಇರುವ ವ್ಯಕ್ತಿಗಳ ಪ್ರವೇಶಕ್ಕೆ ನಿಷೇಧವಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಸೂಚನೆ ನೀಡಿದರು. ಹಾಗೂ ಪರೀಕ್ಷ ಕೇಂದ್ರ ಸುತ್ತಲು ಸೆಕ್ಷನ್ 144 ರನ್ವಯ ನಿಷೇಧಜ್ಞೆ ಘೋಷಿಸಲಾಗುವುದು. ಎಂದರು.