ಮಾರ್ಚ್ 31ರ ಒಳಗೆ ಸ್ಮಾರ್ಟ್ ಸಿಟಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ದಾವಣಗೆರೆ,ಜ.11: ಬರುವ ಮಾರ್ಚ್ 31ರ ಒಳಗೆ ಸ್ಮಾರ್ಟ್ಸಿಟಿಯ ಎಲ್ಲಾ ಕಾಮಗಾರಿ ಮುಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.ನಗರದ ಸರ್ಕೀಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ವರೆಗೂ ಸ್ಮಾರ್ಟ್ಸಿಟಿ ಯೋಜನೆಯಡಿ 300 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಇನ್ನೂ 600 ಕೋಟಿ ರೂ. ಅನುದಾನವಿದ್ದು, ಇದರಲ್ಲಿ ಬರುವ ಮಾರ್ಚ್ 31ರ ಒಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ದಾವಣಗೆರೆಯನ್ನು ಸುಂದರ ನರವನ್ನಾಗಿ ನಿರ್ಮಿಸಿ, ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿರುವುದಾಗಿ ಮಾಹಿತಿ ನೀಡಿದರು.ನಗರ ಸೇರಿದಂತೆ ಇಡೀ ರಾಜ್ಯದಲ್ಲಿರುವ ಕಂದಾಯ ನಿವೇಶನಗಳನ್ನು ಅಕ್ರಮ, ಸಕ್ರಮ ಯೋಜನೆಯಡಿ ಸಕ್ರಮ ಗೊಳಿಸಲು ಈಗಾಗಲೇ ಉಪ ಸಮಿತಿ ರಚಿಸಲಾಗಿದ್ದು, ಈಗಾಗಲೇ ಎರಡು ಸಭೆ ನಡೆಸಲಾಗಿದ್ದು, ಇನ್ನೂ ಎರಡು-ಮೂರು ಸಭೆ ನಡೆಸಿ, ಅದರ ಸಾಧಕ-ಬಾಧಕ ಚರ್ಚಿಸಿ ಬರುವ ಅಧಿವೇಶನದಲ್ಲಿ ಬಿಲ್ ಮಂಡಿಲಸಾಗುವುದು ಎಂದು ಹೇಳಿದರು.ಮೊನ್ನೆ ಸುರಿದ ಅಕಾಲಿಕ ಮಳೆಗೆ ಜಲ್ಲೆಯಲ್ಲಿ 18 ಮನೆ ಕುಸಿದಿದ್ದು, 50 ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎನ್‌ಡಿಆರ್‌ಎಫ್ ನಿಯಮಾವಳಿಯಂತೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ ಎಂದ ಅವರು, ನಗರದ ಸ್ವಚ್ಛತೆ, ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.ಐದು ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ವಹಣೆಗೆ ಯೋಜನೆ ರೂಪಿಸಲಾಗಿದ್ದು, ವೇಗವಾಗಿ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಲಾಗಿದೆ. ಆ.18ರಂದು 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಹೊಸ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪಿಲಾಗುವುದು ಎಂದು ಹೇಳಿದರು.ರಾಜ್ಯ ಸರ್ಕಾರ ನಗರೋತ್ಥಾನ ಯೋಜನೆಯಡಿಯಲ್ಲಿ 125 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಈ ಅನುದಾನದಲ್ಲಿ ಸಿದ್ಧವಾಗಿರುವ ಕ್ರಿಯಾ ಯೋಜನೆಗೆ ಈಗಾಗಲೇ ಅನುಮೋದನೆ ಸಹ ನೀಡಲಾಗಿದ್ದು, ಈ ಅನುದಾನದಲ್ಲಿ ಹಾಳಾಗಿರುವ ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.ಪ್ರತಿವಾರ ಎರಡು ವಾರ್ಡ್ಗಳಲ್ಲಿ ಡ್ರೆöÊವ್ ಮಾಡಿ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು. 15 ಕೋಟಿ ರೂ. ವೆಚ್ಚದಲ್ಲಿ ಕುಂದುವಾಡ ಕೆರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಕೋವಿಡ್ ತೊಡಕಿನ ಮಧ್ಯೆಯು ಅಭಿವೃಧಿಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.ಪುರಾತನವಾಗಿರು ಜಿಲ್ಲಾ ಸಾರ್ವಜನಿಕರ ಆಸ್ಪತ್ರೆಗೆ ಕಾಯಕಲ್ಪ ನೀಡಲು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ನಗರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡುವಂತೆಯು ಮುಖ್ಯಮಂತ್ರಿಗಳೊAದಿಗೆ ಮೌಖಿಕವಾಗಿ ಚರ್ಚಿಸಿದ್ದೇನೆ ಎಂದರು.ಈ ಸಂದರ್ಭದಲ್ಲಿ ಶಾಸಕ ಎಸ್.ಎ.ರವೀಂದ್ರನಾಥ್, ಮೇಯರ್ ಬಿ.ಜಿ.ಅಜಯಕುಮಾರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಾಂತಕುಮಾರಿ, ಸ್ಮಾರ್ಟ್ಸಿಟಿ ವ್ಯಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ದೂಡಾ ಆಯುಕ್ತ ಕುಮಾರಸ್ವಾಮಿ ಮತ್ತಿತರರು ಹಾಜರಿದ್ದರು.
ಬಾಕ್ಸ್: ಶಂಕರ್, ಎಂಟಿಬಿ ನಾಗರಾಜ್, ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದು, ಅವರು ಇದಕ್ಕೆ ಸ್ಪಂದಿಸಿದ್ದಾರೆ. ಇವರೆಲ್ಲರೂ ಶೀಘ್ರದಲ್ಲಿಯೇ ಸಚಿವ ಸ್ಥಾನ ಅಲಂಕರಿಸಲಿದ್ದಾರೆ. ಯತ್ನಾಳ್ ತಮಗೆ ಸಚಿವ ಸ್ಥಾನ ಬೇಡ ಎನ್ನುತ್ತಿದ್ದಾರೆ. ಅವರ ಬದಲು ಬೇರೆಯವರಿಗೆ ಸಚಿವ ಸ್ಥಾನ ದೊರೆಯಲಿದೆ.-ಭೈರತಿ ಬಸವರಾಜ್,ಜಿಲ್ಲಾ ಉಸ್ತುವಾರಿ ಸಚಿವ.
Attachments area